ಇಂದು ರೈತ ಮುಖಂಡರೊಂದಿಗೆ ಸಭೆ
ಯಗಚಿ ಜಲಾಶಯದಿಂದ ಏತ ನೀರಾವರಿ ಮೂಲಕ ಬೇಲೂರು ತಾಲ್ಲೂಕಿನ ಕೆಲವು ಗ್ರಾಮಗಳಿಗೆ ನೀರು ಹರಿಸುವ ಕುರಿತಂತೆ ಹೋರಾಟ ನಿರತರಾಗಿರುವ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅವರು ಜ. 25ರಂದು ಮಧ್ಯಾಹ್ನ 12 ಗಂಟೆಗೆ ಕಚೇರಿ ಸಭಾಂಗಣದಲ್ಲಿ ಚರ್ಚೆ ನಡೆಸಲಿದ್ದಾರೆ. ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೂ ಸಹ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.