ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪೊಲೀಸರನ್ನು ಕಾಪಾಡಿ: ಜಿಲ್ಲಾಧಿಕಾರಿಗೆ ಮನವಿ

Rashmi Kasaragodu
Updated On : 25 Jan 2014, 1:39 am

ಹಾಸನ: ಪೊಲೀಸ್ ಇಲಾಖೆ ಮೇಲೆ ಸರ್ಕಾರ ನಡೆಸುತ್ತಿರುವ ಶೋಷಣೆ ಖಂಡಿಸಿ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರ ಪೊಲೀಸ್ ಸಿಬ್ಬಂದಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದು, ಸರ್ಕಾರವು ಪೊಲೀಸ್ ಅಧಿನಿಯಮದಂತೆ ಪೊಲೀಸ್ ಇಲಾಖೆಗೆ ಸಂವಿಧಾನ ಬದ್ಧವಾಗಿ ಕೊಡಬೇಕಾಗಿರುವ ಮೂಲಭೂತ ಹಕ್ಕುಗಳು ಮತ್ತು ಸವಲತ್ತುಗಳನ್ನು ಕೊಡದೆ ಸಿಬ್ಬಂದಿಗಳ ಮೇಲೆ ಶೋಷಿಸುತ್ತಿದೆ. ಬೆಂಗಳೂರಿನಲ್ಲಿ ಪೊಲೀಸರ ಮೇಲೆ ರಾಜ್ಯ ಸರ್ಕಾರ ಮಾಡುತ್ತಿರುವ ಶೋಷಣೆ ವಿರುದ್ಧ ಧರಣಿ ಸತ್ಯಗ್ರಹವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.ಈ ಸಂದರ್ಭದಲ್ಲಿ ಮಾನವ ಹಕ್ಕುಗಳು ಹಾಗೂ ಭ್ರಷಾಚಾರ ನಿರ್ಮೂಲನಾ ಸಂಸ್ಥೆಯ ಅಧ್ಯಕ್ಷ ಆರ್. ರಾಜಶೇಖರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಡಿ.ಜಗನ್ನಾಥ್, ಅರ್ಜುನ್, ಮಣಿಕಂಠ, ಉಪಾಧ್ಯಕ್ಷ ಎಂ.ಎ. ರಮೇಶ್ಬಾಬು, ತಾಲ್ಲೂಕು ಅಧ್ಯಕ್ಷ ಆಲೂರಿನ ಕೆ.ವಿ. ಸುಧಾ, ಸದಸ್ಯರಾದ ರಂಗಸ್ವಾಮಿ, ಶಿವರುದ್ರಪ್ಪ ಹಾಗೂ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement