ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಲಸಿಕೆ ಹಾಕಿಸಿ, ಪೋಲಿಯೊ ಮುಕ್ತ ದೇಶವನ್ನಾಗಿಸಿ'

Rashmi Kasaragodu
Updated On : 26 Jan 2014, 2:16 am

ಹಾಸನ: ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವುದರ ಮೂಲಕ ದೇಶವನ್ನು ಪಲ್ಸ್ ಪೋಲಿಯೊ ಮುಕ್ತ ದೇಶವನ್ನಾಗಿ ಮಾಡಬೇಕು ಎಂದು ನಗರಸಭೆ ಸದಸ್ಯ ಅಬ್ದುಲ್ ಕಯ್ಯುಂ ಹೇಳಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಇಲಾಖೆ, ಜೀವನಾಧಾರ ಸೇವಾ ಕೇಂದ್ರದ ಆಶ್ರಯದಲ್ಲಿ ಜ. 22ರಂದು ನಗರದ ಪೆನ್ಷನ್ ಮೊಹಲ್ಲಾ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಪಲ್ಸ್ ಪೋಲಿಯೊ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ಪ್ರಚಾರ ಇಲಾಖೆ ಸಹಾಯಕ ಪ್ರಕಾಶ್ ಪ್ರಾಸ್ತಾವಿಕ ಮಾತನಾಡಿದರು.  ನಗರಸಭೆ ಸದಸ್ಯ ಆರೀಫ್ ಖಾನ್, ಜೀವನಾಧಾರ ಸೇವಾ ಕೇಂದ್ರದ  ನಿರ್ದೇಶಕಿ ಸಿಸ್ಟರ್ ಬಿನ್ನಿ ಸಲಹೆಗಾರರಾದ ವೆಂಕಟೇಶ್, ರಮೇಶ್, ಮಹಿಳಾ ಆರೋಗ್ಯ ಸಂದರ್ಶಕಿ ಜಯಮ್ಮ, ರಫೀಕ್ ದರ್ಬಾರ್, ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.


ಹರಳಯ್ಯ ಚಿತ್ರಕ್ಕೆ ಉತ್ತರ ಕರ್ನಾಟಕಲ್ಲಿ ಉತ್ತಮ ಪ್ರತಿಕ್ರಿಯೆ


ಹಾಸನ: ಮಹಾ ಶರಣ ಹರಳಯ್ಯ ಚಲನಚಿತ್ರ ಉತ್ತರ ಕರ್ನಾಟಕದಲ್ಲಿ ಉತ್ತಮವಾಗಿ ಪ್ರದರ್ಶನಗೊಳ್ಳುತ್ತಿದ್ದು, ಹಾಸನದಲ್ಲಿಯೂ ಸಹ ಚಲನಚಿತ್ರವನ್ನು ಬಿಡುಗಡೆ ಮಾಡಲಾಗಿದೆ ಎಂದು ನಿರ್ದೇಶಕ ಬಿ.ಎ. ಪುರುಷೋತ್ತಮ್ ತಿಳಿಸಿದರು. ನಗದರಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಹಾಸನದವರಾದ ಕೆ.ಎನ್. ವೆಂಕಟೇಶ್, ಕೆ.ಬಿ. ರವಿಚಂದ್ರ ಮತ್ತು ಎ. ದೇವರಾಜ್ ಅವರು ಈ ಚಿತ್ರವನ್ನು ನಿರ್ಮಿಸಿದ್ದು, ಈ ಚಿತ್ರ ಅದ್ಭುತವಾಗಿ ಮೂಡಿ ಬಂದಿದ್ದು, ಉತ್ತರ ಕರ್ನಾಟಕದಲ್ಲಿ ಕಳೆದ 2 ವಾರಗಳಿಂದ ಉತ್ತಮ ಪ್ರದರ್ಶನಗೊಳ್ಳುತ್ತಿದೆ. ಈ ಭಾಗದಲ್ಲಿ ಚಿತ್ರಮಂದಿರಗಳ ಸಮಸ್ಯೆಯಿಂದಾಗಿ ಚಿತ್ರವನ್ನು ಬಿಡುಗಡೆ ಮಾಡಿರಲಿಲ್ಲ. ಈಗ ಈ ಭಾಗದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ ಎಂದರು. ಇದು ಈಗಿನ ಜನ ನೋಡಲೇ ಬೇಕಾದಂತಹ ಚಿತ್ರವಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement