ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿದ್ಯಾರ್ಥಿ ವೇತನಕ್ಕಾಗಿಅರ್ಜಿ ಆಹ್ವಾನ

Rashmi Kasaragodu
Updated On : 26 Jan 2014, 2:16 am

ಹಾಸನ: ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವವರ ಪೋಷಕರ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2013-14ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.  ಮ್ಯಾನ್ಯುಯಲ್ ವೆಂಜರ್, ಚಿಂದಿ ಆಯುವವರು, ಚರ್ಮ ಹದಮಾಡುವವರು, ಮಲ ಹೊರುವ ವೃತ್ತಿಯಲ್ಲಿ ತೊಡಗಿರುವ ಎಲ್ಲಾ ಜಾತಿಯ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪಡೆಯಬೇಕಾದರೆ ಕಡ್ಡಾಯವಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ನಗರಸಭೆ ಆಯುಕ್ತರು ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯ್ತಿಯ ಮುಖ್ಯಾಧಿಕಾರಿಗಳಿಂದ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ವಿದ್ಯಾರ್ಥಿಯ ಪೋಷಕರು ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕು.
ಪ್ರವೇಶಾವಕಾಶ: ದೃಢೀಕರಣ ಪತ್ರ ಪಡೆದ ಪೋಷಕರು ತಮ್ಮ ವಿದ್ಯಾರ್ಥಿಗಳನ್ನು ಆಯಾ ತಾಲ್ಲೂಕಿನ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಹೆಸರನ್ನು ನೊಂದಾಯಿಸುವುದು ಕಡ್ಡಾಯವಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement