ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶಿರಾಡಿ ಘಾಟ್ ಬಳಿ ಅಪಘಾತ: 3 ಸಾವು

Rashmi Kasaragodu
Updated On : 26 Jan 2014, 2:18 am

ಹಾಸನ: ಲಾರಿಯೊಂದು ಕಾರಿಗೆ ಡಿಕ್ಕಿ ಮಾಡಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ  ಸಕಲೇಶಪುರ ತಾಲೂಕಿನ  ಶಿರಾಡಿಘಾಟ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಬೆಂಗಳೂರಿನ ನಿವಾಸಿಗಳಾದ ಗೋಪಾಲ್ ರಾವ್, ಪ್ರದೀಪ್ ಕುಮಾರ್ ಮತ್ತು ಸಿದ್ದರಾಮಪ್ಪ ಎಂಬವರು ಸಾವನ್ನಪ್ಪಿದ್ದಾರೆ. ಇನ್ನು ಮೂವರಿಗೆ ಗಾಯವಾಗಿದ್ದು, ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿನ ತಮ್ಮ ಸ್ವಿಫ್ಟ್ ಕಾರಿನಲ್ಲಿ ಹೋಗುತ್ತಿದ್ದಾಗ, ಹಿಂಬದಿಯಿಂದ ಬಂದ ಲಾರಿ ಚಾಲಕನ ನಿರ್ಲಕ್ಷ್ಯತೆಯಿಂದ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಗಾಯವಾಗಿದ್ದ ಈ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತ ಬೆಳಗಿನ ಜಾವ ಸಂಭವಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಲ ಸಮಯ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಸ್ನೇಹಿತ ನಿತೀಶ್ ಚಂದ್ರ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement