ಐಕ್ಯತೆಗೆ ಒಗ್ಗಟ್ಟು ಅಗತ್ಯ: ಬಾಲಕೃಷ್ಣ
ಚನ್ನರಾಯಪಟ್ಟಣ: ದೇಶದಲ್ಲಿ ಮಾನವ ಸಂಪತ್ತು ಹೇರಳವಾಗಿದೆ. ಅದನ್ನು ಸದುಪಯೋಗಪಡಿಸಿಕೊಂಡು ಸಂವಿಧಾನವನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ತಾಲೂಕು ಆಡಳಿತದ ವತಿಯಿಂದ ನಡೆದ 65ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ತಹಸೀಲ್ದಾರ್ ಡಾ.ಎಚ್.ಎಲ್. ನಾಗರಾಜು ಧ್ವಜಾರೋಹಣ ನೆರವೇರಿಸಿದರು. ತಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಶಿಲ್ಪಾ ಶ್ರೀನಿವಾಸ್, ಜಿಪಂ ಸದಸ್ಯರಾದ ಕುಸುಮಾ ಬಾಲಕೃಷ್ಣ, ದೇವಿಕಾ ಪ್ರಕಾಶ್, ಶಿವಶಂಕರ್ ಕುಂಠೆ, ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಮಚಂದ್ರನ್, ಪುರಸಭಾ ಅಧ್ಯಕ್ಷ ಮಂಜಣ್ಣ, ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್, ಎಚ್ಎಸ್ಎಸ್ಕೆ ಅಧ್ಯಕ್ಷ ಮಂಜುನಾಥ್ ಇದ್ದರು. ರಾಜ್ಯ ಸರ್ಕಾರದಿಂದ ನೀಡುವ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆಯಾದ ತಹಸೀಲ್ದಾರ್ ಡಾ.ಎಚ್.ಎಲ್. ನಾಗರಾಜು ಅವರನ್ನು ಸನ್ಮಾನಿಸಲಾಯಿತು.