ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮತಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಿ

Rashmi Kasaragodu
Updated On : 27 Jan 2014, 1:22 am

ಬೇಲೂರು: ಭಾರತ ದೇಶ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದ್ದು 18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಉಪ ತಹಸೀಲ್ದಾರ್ ಶಿವಯ್ಯ ಕರೆ ನೀಡಿದರು. ಪುರಸಭೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಮತದಾರರ ದಿನಾಚರಣೆಯಲ್ಲಿ ಮಾತನಾಡಿ, ಭಾರತ ಚುನಾವಣೆ ಆಯೋಗ ಪ್ರತಿ ವರ್ಷ ಜ.25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತಿದೆ. ಅದರಂತೆ ಹೋಬಳಿ ಕೇಂದ್ರಗಳಾದ ಹಳೇಬೀಡು, ಮಾದಿಹಳ್ಳಿ, ಬಿಕ್ಕೋಡು, ಅರೇಹಳ್ಳಿ ಮತ್ತು ಗ್ರಾಮಂತರ ಮತಗಟ್ಟೆ ಕೇಂದ್ರಗಳಲ್ಲಿ ಹಾಗೂ ಪಟ್ಟಣದ ಪುರಸಭೆಯಲ್ಲಿ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು. ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಚುನಾವಣೆ ಪತ್ರ ನಮೂನೆ 6ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದ್ದಾರೆ. ಉಪ ತಹಸೀಲ್ದಾರ್ ಅಣ್ಣೇಗೌಡ, ಕೃಷಿ ಇಲಾಖೆ ಅಧಿಕಾರಿ ನಾಗೇಂದ್ರಪ್ರಸಾದ್, ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲ ಶಿವಮರಿಯಪ್ಪ, ಪುರಸಭೆ ಆರೋಗ್ಯಾಧಿಕಾರಿ ವೆಂಕಟೇಶ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement