ವಿಜ್ಞಾನದ ಬೆಳವಣಿಗೆಯಿಂದ ಬದಲಾದ ಬದುಕು
ಹಾಸನ: ನಗರದ ಎ.ವಿ. ಕಾಂತಮ್ಮ ಮಹಿಳಾ ಕಾಲೇಜಿನ ಆವರಣದಲ್ಲಿ ಭಾನುವಾರ 65ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಜೆ.ಶೈಲಜಕುಮಾರಿ ಮಾತನಾಡಿ, ಆಧುನಿಕ ವಿಜ್ಞಾನದ ಬೆಳವಣಿಗೆಯಿಂದಾಗಿ ಸಾಮಾಜಿಕ, ರಾಜಕೀಯ ಮತ್ತು ನೈತಿಕ ತಳಪಾಯಗಳು ತೀವ್ರವಾಗಿ ಮಾರ್ಪಾಡಾಗುತ್ತಿವೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕರು, ಬೋಧಕೇತರರು, ವಿದ್ಯಾರ್ಥಿನಿಯರು ಇದ್ದರು.