ಇಂದು ಮಹಿಳಾ ಕ್ರಿಕೆಟ್ ಕೂಟ
ಹಾಸನ: ಮೈಸೂರು ವಿಶ್ವವಿದ್ಯಾನಿಲಯ ಮತ್ತು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಮಲೆನಾಡು ವಲಯ ಮಹಿಳಾ ಕ್ರೀಡಾಕೂಟವನ್ನು ಜ. 28ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ. ನಗರಸಭೆ ಸದಸ್ಯ ಯಶ್ವಂತ್ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಪ್ರೊ.ರೂಪರಾಜಜ್ಚದನ್ ಅಧ್ಯಕ್ಷತೆ ವಹಿಸುವರು.
ಅಜಯ್ಗೆ ಪ್ರಶಸ್ತಿ
ಅರಸೀಕೆರೆ: 2012-13 ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಟ್ಟಣದ ಸೇಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ಆರ್. ಅಜಯ್ ಅತಿ ಹೆಚ್ಚು ಅಂಕ ಗಳಿಸಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ರು. 10,000 ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಲ್ಲಿ ಹಾಸನ ಜಿಲ್ಲೆಗೇ ಪ್ರಥಮ ಸ್ಥಾನವನ್ನು ಗಳಿಸಿದ ಅಜೇಯ್ಗೆ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿ ಮಿತ್ರರ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ.