'ಕಾನೂನುಗಳ ಬಗ್ಗೆ ವಿದ್ಯಾರ್ಥಿನಿಯರು ತಿಳಿಯಬೇಕು'
ಹಾಸನ: ಕಾನೂನು ಉಪಯೋಗಗಳ ಬಗ್ಗೆ ವಿದ್ಯಾರ್ಥಿನಿಯರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಅಧಿಕ ಹಿರಿಯ ಸಿವಿಲ್ ನ್ಯಾಯಾಧೀಶ ಜಯಂತ್ ಕುಮಾರ್ ತಿಳಿಸಿದ್ದಾರೆ.
ಜಾಗೃತಿ ಮೂಡಿಸಬೇಕು: ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಬದ್ಧವಾಗಿ ದೊರೆತಿರುವ ಹಕ್ಕುಗಳನ್ನು ನಾವು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಯುವಕರು ನಮ್ಮ ಸಂವಿಧಾನದ ಹಕ್ಕುಗಳನ್ನು ಅರಿತು ಇತರರಿಗೂ ಅದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. 3ನೇ ಅಧಿಕ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್.ಪಿ. ದಿಡ್ಡಿ ಅವರು, ಮಹಿಳಾ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು, ಅವುಗಳ ಬಗ್ಗೆ ಜನ ಸಾಮಾನ್ಯರಿಗೆ ಸೂಕ್ತ ರೀತಿಯಲ್ಲಿ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.