ತ್ರಿವೇಣಿ, ರಶ್ಮಿಗೆ ಶಿಕ್ಷಣ ಮಂಡಳಿ ಸದಸ್ಯತ್ವ
ಹಾಸನ: ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿನಿ ಕೈ.ವೈ.ತ್ರಿವೇಣಿ, ಹಾಗೂ ಪ್ರಥಮ ಬಿಕಾಂ ವಿದ್ಯಾರ್ಥಿನಿ ರಶ್ಮಿ ಪ್ರಭು ಅವರು ಮೂರು ವರ್ಷದ ಅವಧಿಗೆ ಮೈಸೂರು ವಿಶ್ವವಿದ್ಯಾನಿಲಯ ಶಿಕ್ಷಣ ಮಂಡಳಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.
ಈ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಒಟ್ಟು ಆರು ಪ್ರತಿನಿಧಿಗಳಲ್ಲಿ ನಮ್ಮ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರನ್ನು ನಾಮ ನಿರ್ದೇಶನ ಮಾಡಿದ ವಿಶ್ವವಿದ್ಯಾನಿಲಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.