ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮುಕ್ತ ವಿವಿ ಸಂಪರ್ಕ ಕಾರ್ಯಕ್ರಮ

Rashmi Kasaragodu
Updated On : 28 Jan 2014, 12:37 pm

ಹಾಸನ: ಮೈಸೂರು ಮುಕ್ತಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ  ಹಾಸನ ಪ್ರಾದೇಶಿಕ ಕೇಂದ್ರದ ವತಿಯಿಂದ ಎಂ.ಎ., ಎಂ.ಕಾಂ ತರಗತಿಗಳ ಸಂಪರ್ಕ ಕಾರ್ಯಕ್ರಮವನ್ನು ಜ. 28ರಂದು ಬೆಳಗ್ಗೆ 10ಕ್ಕೆ ನಗರದ ಬಿಈಜಿ ಕಾಲೇಜು ಸಭಾಂಗಣದಲ್ಲಿ  ಆಯೋಜಿಸಿದೆ.
  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಕಾರ್ಯಕ್ರಮ ಉದ್ಘಾಟಿಸುವರು. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿನೋದ್ ಚಂದ್ರ ಮತ್ತು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಪಿ. ಹರೀಶ್ ಭಾಗವಹಿಸುವರು. ಬಿ.ಈ.ಜಿ. ಕಾಲೇಜಿನ ಪ್ರಾಂಶುಪಾಲ  ಬಿ.ಈ. ಜಗದೀಶ್ ಅಧ್ಯಕ್ಷತೆ ವಹಿಸುವರು.
ಸಮಾಲೋಚನಾ 31ರಂದು ಸಭೆ
ಹಾಸನ: ನಗರಸಭೆಯ 2014-15 ನೇ ಸಾಲಿನ ಆಯ-ವ್ಯಯ ಅಂದಾಜು ಪಟ್ಟಿ ತಯಾರಿಸುವ ಸಂಬಂಧ ಜ. 31ರಂದು ಬೆಳಗ್ಗೆ 11ಕ್ಕೆ 2ನೇ ಸುತ್ತಿನ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ನಗರಸಭೆ ಅಧ್ಯಕ್ಷೆ ಹೆಚ್.ಹೆಚ್ ಶ್ರೀ ವಿದ್ಯಾ ಅಧ್ಯಕ್ಷತೆಯಲ್ಲಿ  ನಗರದ ಹರ್ಷ ಮಹಲ್ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಸಭೆ  ಕರೆಯಲಾಗಿದೆ.
ಸಭೆಗೆ ಹಾಸನ ನಗರದ ಹಿರಿಯ ನಾಗರಿಕರು, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಯವರನ್ನು ಆಹ್ವಾನಿಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತ  ಕೃಷ್ಣಮೂರ್ತಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement