ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಯುವಚೇತನ'ಕ್ಕೆ 1500ಕ್ಕೂ ಹೆಚ್ಚು ಕಾರ್ಯಕರ್ತರು

Mainashree
Updated On : 28 Jan 2014, 9:06 am

ಸಕಲೇಶಪುರ: ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಸೋಮವಾರ ನಡೆದ ಯುವ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜ. 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಜಾತ್ಯಾತಿತ ಯುವ ಜನತಾದಳದ ಯುವ ಚೇತನ ಕಾರ್ಯಕ್ರಮಕ್ಕೆ 1500ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಮುಖಂಡರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರು ಪಾತ್ರ ಮಹತ್ವದ್ದಾಗಿದ್ದು ಪಕ್ಷಕ್ಕೆ ಹಚ್ಚು ಯುವಕರನ್ನು ಸೆಳೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮ  ಚೈತನ್ಯ ತುಂಬಲಿದೆ ಎಂದರು.
ಸಭೆಯಲ್ಲಿ ಮುಖಂಡರಾದ ಸ.ಬ. ಭಾಸ್ಕರ್, ಯಾದ್‌ಗಾರ್ ಇಬ್ರಾಹಿಂ, ಸುಪ್ರದೀಪ್ ಯಜಮಾನ್, ಗೋಪಾಲ ಸ್ವಾಮಿ, ಜೈಭೀಮ್ ಮಂಜುನಾಥ್, ರಾಕೇಶ್ ಮನಜಸ್, ಪ್ರದೀಪ್, ಪುರಸಭೆ ಅಧ್ಯಕ್ಷ ಸತೀಶ್ ಉಪಾಧ್ಯಕ್ಷ ಮುಖೇಶ್, ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಉಮೇಶ್, ಗಿರೀಶ್, ಇತರರು ಇದ್ದರು.
ಹೆಣ್ಣುಮಕ್ಕಳ ರಕ್ಷಣೆಗೆ ಅಭಿಯಾನ
ಹಾಸನ: ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಿಂದ ಹೆಣ್ಣು ಮಕ್ಕಳ ರಕ್ಷಣೆಗಾಗಿ ಅಭಿಯಾನ ಎಂಬ ವಿನೂತನ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್‌ನ ಶ್ರೀಯಾಂಜೆ ಅವರು ಈ ಕಾರ್ಯಕ್ರಮದ ಮಹತ್ವವನ್ನು ತಿಳಿಸಿಕೊಡುತ್ತಾ, ಇಂದಿನ ಹೆಣ್ಣು ಮಕ್ಕಳು ಮುಂದಿನ ತಮ್ಮ ನೆಮ್ಮದಿಯ ಜೀವನಕ್ಕಾಗಿ ತೆಗೆದುಕೊಳ್ಳಬೇಕಾದ ತೀರ್ಮಾನಗಳನ್ನು ತಿಳಿಸಿದರು.
ಎ.ವಿ. ಕಾಂತಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ.ಜೆ. ಶೈಲಾಜಕುಮಾರಿ ಅವರು ಹೆಣ್ಣು ಮಕ್ಕಳು ಯಾವುದೇ ಪೂರ್ವಾಗ್ರಹಕ್ಕೆ ಒಳಗಾಗದೆ ಎಚ್ಚರಿಕೆಯಿಂದ ಜೀವನವನ್ನು ಸ್ವೀಕರಿಸಬೇಕೆಂದು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಎಲ್ಲಾ ವಿದ್ಯಾರ್ಥಿಗಳು ಪ್ರತಿಜ್ಞಾಯನ್ನು ಸ್ವೀಕರಿಸಿದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ, ವಿದ್ಯಾರ್ಥಿನಿಯರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement