ಹೊಳೆನರಸೀಪುರ: ಇಲ್ಲಿನ ವಾಸವಿ ಕ್ಲಬ್ನ ವತಿಯಿಂದ ಗಣರಾಜ್ಯೋತ್ಸವದ ಆಚರಣೆಯ ಅಂಗವಾಗಿ ಶಾಲಾ ಮಕ್ಕಳಿಗಾಗಿ ಪರಿಸರ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಮಾಲಿನ್ಯವನ್ನು ತಡೆಗಟ್ಟುವ ಮಾರ್ಗಗಳ ಕುರಿತಂತೆ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಪಟ್ಟಣದ ಶ್ರೀ ವೆಂಕಟೇಶ್ವರ ಎಜುಕೇಷನ್ ಟ್ರಸ್ಟ್ನ 79 ವಿದ್ಯಾರ್ಥಿಗಳು ಹಾಗೂ ಶ್ರೀ ಲಕ್ಷ್ಮೀನರಸಿಂಹ ವಿದ್ಯಾಸಂಸ್ಥೆಯ 19 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಫೆ. 4ರಂದು ನಡೆಯಲಿರುವ ವಾಸವಿ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು ಎಂದು ವಾಸವಿ ಕ್ಲಬ್ನ ಅಧ್ಯಕ್ಷ ವಾ. ಗೋಕುಲ್ ಹಾಗೂ ಕಾರ್ಯದರ್ಶಿ ಮತ್ತು ವಾಸವಿ ಕೋ- ಆಪರೇಟೀವ್ ಬ್ಯಾಂಕಿನ ವ್ಯವಸ್ಥಾಪಕ ಎಸ್.ಆರ್. ಮೂರ್ತಿ ತಿಳಿಸಿದ್ದಾರೆ. ಕಾರ್ಯಕ್ರಮದ ನೇತೃತ್ವವನ್ನು ಪ್ರಾಜೆಕ್ಟ್ ಮುಖ್ಯಸ್ಥ ಅವಿನಾಶ್ ವಹಿಸಿದ್ದರು.