ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಲೋಕಾ ದಾಳಿ

Rashmi Kasaragodu
Updated On : 30 Jan 2014, 1:27 am

ಹಾಸನ: ಹಾಸನದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಅಳತೆ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಣಾಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಎಸ್.ಪಿ. ವೇದಮೂರ್ತಿ ನೇತೃತ್ವದ ತಂಡ ದಾಳಿ ಮಾಡಿ ಆಸ್ತಿಪಾಸ್ತಿ ಬಗ್ಗೆ ಪರಿಶೀಲನೆ ನಡೆಸಿದರು. 11 ತಿಂಗಳ ಹಿಂದಷ್ಟೇ ಹಾಸನಕ್ಕೆ ವರ್ಗವಾಗಿ ಬಂದಿದ್ದ ನರಸಿಂಹಮೂರ್ತಿ ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಹಾಸನಕ್ಕೆ ಬರುವ ಮುನ್ನ ಚಿಕ್ಕಬಳ್ಳಾಪುರ, ಬೆಂಗಳೂರು ಮೊದಲಾದ ಕಡೆ ಕರ್ತವ್ಯ ನಿರ್ವಹಿಸಿದ್ದ ಇವರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಹಾಸನದ ನಿವಾಸದ ಮೇಲೆ ವೇದಮೂರ್ತಿ ತಂಡ ದಾಳಿ ನಡೆಸಿದ್ದರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ನಿವಾಸಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇತರರು ದಾಳಿ ನಡೆಸಿ ಕಡತ ಪರಿಶೀಲನೆಯಲ್ಲಿ ನಡೆಸಿದ್ದಾರೆ. ಈ ಸಂದರ್ಭ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement