ಹಾಸ್ಟೆಲ್ಗಳಿಗೆ ಭೇಟಿ ಪರಿಶೀಲಿಸಿದ ಜಿಪಂ ಅಧ್ಯಕ್ಷೆ
ಹಾಸನ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಡಿ.ಜಿ. ಅಂಬಿಕ ರಾಮಣ್ಣ ಅವರು ಮಂಗಳವಾರ ರಾತ್ರಿ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಹಾಸ್ಟೆಲ್ನಲ್ಲಿನ ಸ್ವಚ್ಛತೆ ಸೇರಿದಂತೆ ಊಟ, ವಸತಿ ಹಾಗೂ ಇತರೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ, ವಿದ್ಯಾರ್ಥಿಗಳಿಂದ ಹಾಸ್ಟೆಲ್ನ ಬಗ್ಗೆ ಮಾಹಿತಿಯನ್ನು ಪಡೆದರು. ಕೆಲ ಹಾಸ್ಟೆಲ್ಗಳಲ್ಲಿನ ಅವ್ಯವಸ್ಥೆಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು.