ಸಿಎಫ್ಒಐ ಪ್ರತಿಭಟನೆ
ಹಾಸನ: ಫ್ಯಾಸಿಸಂನಿಂದ ಗಣರಾಜ್ಯವನ್ನು ರಕ್ಷಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯ (ಸಿಎಫ್ಒಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆಯಿಂದ ಮೆರಣಿಗೆ ಪ್ರಾರಂಭಿಸಿ ಎನ್.ಆರ್. ವೃತ್ತ, ಬಿ.ಎಂ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.