ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಮಹಿಳೆಯರು ವೈಜ್ಞಾನಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು'

Mainashree
Updated On : 31 Jan 2014, 9:09 am

ರಾಮನಾಥಪುರ: ಸಮಾಜದಲ್ಲಿ ನೆಲೆಯೂರಿರುವ ಹಲವಾರು ಅನಿಷ್ಠ ಪದ್ಧತಿಗಳ ನಡುವೆಯೂ ಮೌಢ್ಯಗಳನ್ನು ಮೆಟ್ಟಿನಿಂತು ಅಭಿವೃದ್ಧಿಯತ್ತ ಸಾಗುವಲ್ಲಿ ಮಹಿಳೆಯರು ವೈಜಾನಿಕ ಪ್ರಜ್ಞೆ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಕರೆ ನೀಡಿದ್ದಾರೆ.
ಪೋಷಕರ ಜವಾಬ್ದಾರಿ: ಇಲ್ಲಿಯ ಬಸವೇಶ್ವರ ಶಿಕ್ಷಣ ಸಂಸ್ಥೆ ಬಸವೇಶ್ವರ ವೃತ್ತದಲ್ಲಿರುವ ಶ್ರೀ ವೆಂಕಟೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇತ್ತೀಚೆಗೆ ನಡೆದ ತಾಯಂದಿರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೌದ್ಧಿಕ ಬೆಳವಣಿಗೆ ಇಲ್ಲದಿದ್ದರೆ ಅವಕಾಸಗಳನ್ನು ಜಯಿಸಲು ಸಾಧ್ಯವಿಲ್ಲ. ಇಂದೇ ತಮ್ಮ ಮಕ್ಕಳಿಗೆ ಸಕಲವು ಸಿಗುವ ಶಿಕ್ಷಣವನ್ನು ಕೊಡಿಸುವತ್ತ ಆಲೋಚಿಸುವ ಜತೆಗೆ ಸಂಸ್ಕಾರವಂತರನ್ನಾಗಿ ಮಾಡುವುದು ಪೋಷಕರ ಮೇಲೆ ಇದೆ ಎಂದು ತಿಳಿಸಿದರು.
ಕಾಲೇಜು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಾದಿಕ್ ಸಾಬ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಣನೂರು ಕನ್ನಡ ಸಹ ಪ್ರಾದ್ಯಾಪಕಿ ಡಾ. ಕೆ.ಜಿ. ಕವಿತ, ಬಸವೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ. ಅರ್. ತಿಮ್ಮರಾಜ್ ಮಾತನಾಡಿದರು. ಜಿಪಂ ಸದಸ್ಯೆ ಸರೋಜಮ್ಮ, ಗ್ರಾಪಂ ಅಧ್ಯಕ್ಷೆ ಸರಸ್ವತಿ ಇತರರು  ಇದ್ದರು.  
ರಾಜ್ಯ ಪ್ರಶಸ್ತಿ ಪುರಸ್ಕೃತೆ ಪ್ರೇಮಮ್ಮ ಹಾಗೂ ಡಾ. ಎಸ್. ದೀಪಾನ್ಯ ಇತರರನ್ನು  ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ಶ್ರೀಧರ್ ಸ್ವಾಗತಿಸಿ, ಕಾವ್ಯ ನಿರೂಪಿಸಿದರು.  ಸೋಮಯ್ಯ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement