ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಕ್ಷರ ದಾಸೋಹ ನೌಕರರ ಪ್ರತಿಭಟನೆ

Rashmi Kasaragodu
Updated On : 2 Jul 2014, 12:55 pm

ಅರಕಲಗೂಡು: ರಾಜ್ಯ ಸಿಐಟಿಯು ಕರೆ ಮೇರೆಗೆ ಇಲ್ಲಿನ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತರು ಅರಕಲಗೂಡು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಗಳವಾರ ಬೆಳಿಗ್ಗೆ ಇಲ್ಲಿನ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ತೆರಳಿದ ಅಕ್ಷರ ದಾಸೋಹ ನೌಕರರು ಕನಿಷ್ಠ ಕೂಲಿ ಮತ್ತು ಭಾರತ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನ(ಐಎಲ್‌ಸಿ)ಶಿಫಾರಸ್ಸಿನ ಜಾರಿಗೆ ಆಗ್ರಹಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಇದೇ ವೇಳೆ ತಾಲೂಕು ಪಂಚಾಯಿತಿಗೆ ತೆರಳಿದ ಪ್ರತಿಭಟನಾಕಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವರಾಂ ಮತ್ತು ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಮಾಕಮ್ಮ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಅಕ್ಷರಸ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಯಶೋಧಮ್ಮ, ಕಾರ್ಯದರ್ಶಿ ಸುಜಾತ ಸೇರಿದಂತೆ ಮಂಜುಳಾ,ಗೀತಾ,ಪ್ರೇಮ, ಶೈಲ ಇತರರು ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement