ಗ್ರಾಪಂಗೆ ಬೀಗ ಹಾಕಿ ಪ್ರತಿಭಟನೆ
ಚನ್ನರಾಯಪಟ್ಟಣ: ಗ್ರಾಮ ನೈರ್ಮಲ್ಯ ಯೋಜನೆ ಹಾಗೂ ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ನೀಡಿಲ್ಲವೆಂಬ ಕಾರಣವನ್ನು ಮಂದಿಟ್ಟುಕೊಂಡು ತಾಲೂಕು ರೈತ ಸಂಘದ ಕಾರ್ಯಕರ್ತರು ಹಾಗೂ ಫಲಾನುಭವಿಗಳು ತಾಲೂಕಿನ ದಿಡಗ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಮಂಗಳವಾರ ನಡೆಯಿತು.
ತಾಲೂಕು ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಜನತೆ ದಿಡಗ ತುಮಕೂರು ಗ್ರಾಮದಲ್ಲಿ ಗ್ರಾಮೀಣ ನೈರ್ಮಲ್ಯ ಯೋಜನೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶೌಚಾಲಯ ನಿರ್ಮಿಸಿಕೊಂಡ ನಿವಾಸಿಗಳು ತಮಗೆ ಸರ್ಕಾರದಿಂದ ಸಿಗುವ ಪ್ರೋತ್ಸಾಹ ಧನ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಪಂ ಕಚೇರಿಗೆ ಬೀಗ ಜಡಿದು ರಾತ್ರಿ 7ರವರಗೆ ಧರಣಿ ಮುಂದುವರಿಸಿದರು. ರಾತ್ರಿಯವರಗೆ ಧರಣಿ ಮುಂದುವರಿಸಿದರು.