ತೃಣಮೂಲ ಕಾಂಗ್ರೆಸ್ ಸಂಸದನ ವಿರುದ್ಧ ಆಕ್ರೋಶ
ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಹಾಸನ: ಮಹಿಳೆಯರ ಮೇಲೆನ ದೌರ್ಜನ್ಯ ಹಾಗೂ ಅತ್ಯಾಚಾರ ತಡೆಗಟ್ಟುವ ಬದಲು ಅದನ್ನು ಪ್ರೋತ್ಸಾಹ ನೀಡುತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದ ತಪಸ್ ಪಾಲ್ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್. ವೃತ್ತ, ಬಿ.ಎಂ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿಗೆ ಮನವಿ ನೀಡಿದರು. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳನ್ನು ತಡೆಯುವ ಬದಲು ಅದನ್ನು ಪ್ರೋತ್ಸಾಹಿಸಿದ ಘಟನೆ ತೃಣಮೂಲ ಕಾಂಗ್ರೆಸ್ ಸಂಸದ ತಪಸ್ ಪಾಲ್‌ರಿಂದ ನಡೆದಿದೆ. ಈ ವಿರುದ್ಧ ವಿದ್ಯಾರ್ಥಿ ಶಕ್ತಿ ಆಕ್ರೋಶಗೊಂಡಿದೆ. ತನ್ನ ವಿರೋಧ ಪಕ್ಷದ ಕಾರ್ಯಕರ್ತರನ್ನು ಹಲ್ಲೆ ಮತ್ತು ಅತ್ಯಾಚಾರ ಮಾಡುವುದಾಗಿ ಹೇಳಿರುವ ಸಂಸದರ ವ್ಯಕ್ತಿತ್ವ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಇಂತ ಗೂಂಡಾ ಸಂಸದರನ್ನು ಬಂಧಿಸಬೇಕು. ಸಂಸದನ ವಿರುದ್ಧ ಯಾವ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿವಸಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಕಾರ್ಯದರ್ಶಿ ಲಕ್ಷ್ಮಿಕೇಶವ, ಅಭಿಷೇಕ್, ಪ್ರವೀಣ್, ಮಂಜು, ರಾಜು, ಕಿರಣ್‌ಕುಮಾರ್, ಪ್ರಕಾಶ್, ರಾಘು, ದಿನೇಶ್ ಹಾಗೂ ಇತರರು ಇದ್ದರು.