ಪೌರ ಕಾರ್ಮಿಕರಿಗೆ 24 ಗಂಟೆಯೊಳಗೆ ವೇತನ: ಆಯುಕ್ತ
ಹಾಸನ: ನಗರಸಭೆ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬಿತ್ಯಾದಿ ಆರೋಪಗಳನ್ನು ನಗರಸಭೆ ಪಕ್ಷೇತರ ಸದಸ್ಯರು ಮಾಡಿರುವುದಕ್ಕೆ ಉತ್ತರಿಸುವುದಿಲ್ಲ. ಆದರೆ ಪೌರ ಕಾರ್ಮಿಕರಿಗೆ ವೇತನ ನೀಡದಿರುವುದು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು 24 ಗಂಟೆಗಳಲ್ಲಿ ಬಗೆಹರಿಸಲಾಗುವುದು ಎಂದು ನಗರಸಭೆ ಆಯುಕ್ತ ಕೃಷ್ಣಮೂರ್ತಿ ಹೇಳಿದ್ದಾರೆ.
ಸದಸ್ಯ ಎಚ್.ಎಂ. ಸುರೇಶ್ ಕುಮಾರ್ ಅವರು, ಸ್ವಚ್ಛತೆ ಟೆಂಡರ್ ಪಡೆದಿರುವ ಗುತ್ತಿಗೆದಾರ ನಾಪತ್ತೆಯಾಗಿದ್ದು, ಪೌರ ಕಾರ್ಮಿಕರಿಗೆ ವೇತನ ನೀಡುತ್ತಿಲ್ಲ. ಸ್ವಚ್ಛತೆ ಕೆಲಸ ನಡೆಯುತ್ತಿಲ್ಲ. ಅಧ್ಯಕ್ಷರು ಮತ್ತು ಆಯುಕ್ತರ ನಡುವಿನ ಜಗಳದಿಂದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದೆಲ್ಲಾ ಆರೋಪ ಮಾಡಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ತಿಳಿಸಿದ್ದಾರೆ.