ಬಿಎಸ್ಪಿ ಸಂಘಟಿಸಲು ಯತ್ನ: ಮಹೇಶ್
ಹಾಸನ: ರಾಜ್ಯಾದ್ಯಂತ ಪಕ್ಷವನ್ನು ಪುನರ್ ರಚಿಸಿ ಸಂಘಟನ ಮಾಡುವ ಮೂಲಕ ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಸದೃಢಗೊಳಿಸಿ 10 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶವನ್ನು ಹೊಂದಲಾಗಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎನ್. ಮಹೇಶ್ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ 30 ಜಿಲ್ಲೆಗಳ ಪ್ರವಾಸವನ್ನು ಕೈಗೊಂಡಿದ್ದು, ಕೋಲಾರ, ಬೀದರ್, ಚಿಕ್ಕಮಗಳೂರು ಜಿಲ್ಲೆಗಳ ಪ್ರವಾಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು, ಮಂಡ್ಯ ಹಾಗೂ ಇತರೆ ಜಿಲ್ಲೆಗಳ ಪ್ರವಾಸವನ್ನು ಕೈಗೊಂಡು ಅಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಲಾಗುತ್ತದೆ. ಹೊಸದಾಗಿ ಅಧ್ಯಕ್ಷರು, ಕಾರ್ಯಕರ್ತರನ್ನು ನೇಮಕ ಮಾಡಲಾಗುತ್ತಿದೆ ಎಂದರು.
ರಾಜಿನಾಮೆ ನೀಡುವೆ: 2018ರ ಚುನಾವಣೆಯಲ್ಲಿ ಪಕ್ಷಕ್ಕೆ 10 ಸ್ಥಾನಗಳನ್ನು ತಂದು ಕೊಡಲು ಸಾಧ್ಯಗದಿದ್ದರೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೇ ನೀಡುವುದಾಗಿ ಅವರು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಾಜೇಶ್, ಎ.ಪಿ.ಅಹಮದ್ ಹಾಗೂ ಇತರರು ಇದ್ದರು