ವರ್ಷಾಂತ್ಯ ಪರಿಹಾರ
ಅರಸೀಕೆರೆ: ದಶಕಗಳಿಂದಲೂ ಪಟ್ಟಣದ ಜನತೆ ಎದುರಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಈ ವರ್ಷಾಂತ್ಯದಲ್ಲಿ ಪರಿಹಾರ ದೊರಕಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಮೋಹನ್ ಕುಮಾರ್ ತಿಳಿಸಿದ್ದಾರೆ. ಕರ್ನಾಟಕ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿ ರು. 121ಕೋಟಿ ವೆಚ್ಚದಲ್ಲಿ ಚನ್ನರಾಯಪಟ್ಟಣ ತಾಲೂಕು ಘನ್ನೀಗೇಡದಿಂದ ಪಟ್ಟಣದ ಜನತೆಗೆ (24್ಢ7) ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದ್ದು ಬುಧವಾರ ಪಟ್ಟಣದ ಶ್ರೀನಿವಾಸನಗರ ಬಡವಾಣೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಏಕಕಾಲದಲ್ಲೇ 121 ಕೋಟಿ ವೆಚ್ಚದ ಕುಡಿಯುವ ನೀರು ಸರಬರಾಜು ಕಾಮಗಾರಿಯ ಜೊತೆಗೆ ಪುರಸಭೆ ವ್ಯಾಪ್ತಿಯಲ್ಲಿ ಸಂಪೂರ್ಣ ಹದಗೆಟ್ಟಿದ್ದ ಒಳಚರಂಡಿ ಕಾಮಗಾರಿಯೂ ರು. 80 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ ಎಂದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಸಮೀವುಲ್ಲಾ, ಮಲ್ಲೇಶ್ ನಾಯ್ಕ್ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್, ಆರೋಗ್ಯ ನಿರೀಕ್ಷಕ ರಮೇಶ್, ಪುರಸಭೆ ಸದಸ್ಯ ಶೈಲೇಂದ್ರಕುಮಾರ್, ಅನ್ನಪೂರ್ಣ ಸತೀಶ್ ಇದ್ದರು.