ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಕ್ರಮ ಮದ್ಯ ಮಾರಾಟಕ್ಕೆ ಖಂಡನೆ

Rashmi Kasaragodu
Updated On : 4 Jul 2014, 11:40 am

ಕನ್ನಡಪ್ರಭ ವಾರ್ತೆ, ಹಾಸನ. ಜು 4
ಕೊಂಡಜ್ಜಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸುವಂತೆ ಕೊಂಡಜ್ಜಿ ಸ್ವಸಹಾಯ ಸಂಘದ ಸದಸ್ಯೆಯರು ಮತ್ತು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ತಾಲೂಕಿನ ಸಾಲಗಾಮೆ ಹೋಬಳಿಯ ಕೊಂಡಜ್ಜಿಯಲ್ಲಿ ನರಸಯ್ಯ ಎಂಬವರು ಅಕ್ರಮವಾಗಿ ಗ್ರಾಮದಲ್ಲಿ ಮದ್ಯಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಮದ ಗಂಡಸು ಸದಾಕಾಲ ಮದ್ಯದ ಅಂಗಡಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಅಲ್ಲದೆ ಮದ್ಯ ಸೇವಿಸಿ ಮನೆಗೆ ಬಂದು ಗಲಾಟೆಯನ್ನು ಮಾಡುತ್ತಿದ್ದಾರೆ. ಇದರಿಂದ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಜೀವಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ವಸೂಲಿ: ಸಂಘದ ವತಿಯಿಂದ ನರಸಯ್ಯನನ್ನು ಕೇಳಿದರೆ ನರಸಯ್ಯ ಹಾಗೂ ಅವರ ಪತ್ನಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವ ಬದಲು ನರಸಯ್ಯನಿಂದ ಹಣವನ್ನು ಪಡೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ ಎಂದು ಮಹಿಳೆಯರು ಅಲವತ್ತುಕೊಂಡರು.
ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳು ಓಡಾಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಜಯಮ್ಮ, ಭಾಗ್ಯ, ಕವಿತ, ಶಾರದ, ಮಂಜುಳ, ಜಯಲಕ್ಷ್ಮಿ, ಶೋಭಾ, ಗಂಗಮ್ಮ, ಗಾಯತ್ರಿ, ಜ್ಯೋತಿ, ಪದ್ಮ, ರೇಣುಕಾ, ಭವ್ಯ, ಹನುಮಮ್ಮ, ಸುಶೀಲ ಹಾಗೂ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement