ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಾವೇರಿಗಾಗಿ ಕೊನೆವರೆಗೂ ಹೋರಾಡುವೆ: ದೇವೇಗೌಡ

Rashmi Kasaragodu
Updated On : 6 Jul 2014, 12:16 pm

ಹಾಸನ: ಕಾವೇರಿ ನ್ಯಾಯ ಮಂಡಳಿ ಸಭೆ ಜು.15ಕ್ಕೆ ಇದ್ದು, ಆ ಸಭೆಯು ಏನಾಗುತ್ತೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆತಂಕ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯದ ಪರಿಸ್ಥಿತಿ ಕುತ್ತಿಗೆಗೆ ಬಂದಿದ್ದು, ರಾಜ್ಯದ ನಿಲುವಿನ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ. ಜೊತೆಗೆ ಪ್ರಧಾನಮಂತ್ರಿಯವರ ಹತ್ತಿರ ಮನವಿ ಮಾಡಲಾಗಿದೆ ಎಂದ ಅವರು, ಕಾವೇರಿ ವಿಚಾರದಲ್ಲಿ ನಾನು ಕೊನೆಯವರೆಗೂ ಹೋರಾಡುತ್ತೇನೆ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ತುರ್ತು ಸ್ಥಿತಿಗೆ ಬಂದಿದ್ದು, ನಾವು ಎಚ್ಚರಗೊಳ್ಳಬೇಕಾಗಿದೆ. ನ್ಯಾಯ ಮಂಡಳಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳು ರಾಜ್ಯಗಳು ಪಾಲ್ಗೊಳ್ಳಲಿದ್ದು, ನನ್ನ ಕೈನಲ್ಲಿ ಎಷ್ಟು ಸಾಧ್ಯವೋ ಅಷ್ಟು ಹೋರಾಟವನ್ನು ಮಾಡುತ್ತೇನೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದರು.
ಕಾನೂನು ಹದಗೆಟ್ಟಿದೆ: ವಿಧಾನಸಭೆಯ ಅಧಿವೇಶನದಲ್ಲಿ ಗೃಹಸಚಿವರೇ ತಮಗೆ ಬೆದರಿಕೆ ಇದೆ ಎಂದು ಹೇಳಿಕೆ ನೀಡುವುದು ದುರಂತ. ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ತನ್ನ ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಅಧಿಕಾರದಲ್ಲಿ ಲೋಪವಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಯಾವುದೇ ಸರ್ಕಾರದ ಆಡಳಿತ ವೈಖರಿ ಬಗ್ಗೆ ಮಾತನಾಡಬೇಕಾದರೂ ಕನಿಷ್ಠ 6 ತಿಂಗಳ ಕಾಲನಾದರೂ ಅವರಿಗೆ ಕಾಲಾವಕಾಶ ನೀಡಬೇಕು. ಅದನ್ನು ಬಿಟ್ಟು ಸುಮ್ಮನೆ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಸರಿಯಲ್ಲ. ಬೆಲೆ ಏರಿಕೆ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಆಗಂತ ನಾನು ಮೃದು ಸ್ವಾಭಾವವನ್ನು ತಾಳುತ್ತಿಲ್ಲ ಎಂದರು.
ಜಿಲ್ಲೆಯಲ್ಲಿ ವಾಸ್ತವ್ಯ: ಹೊಳೆನರಸೀಪುರದಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದವರು ಸಿಕ್ಕಿಕೊಟ್ಟಿರುವ ಬಗ್ಗೆ ಕೇಳಿದ ಪ್ರಶ್ನೇಗೆ ಗೌಡರು ಪ್ರತಿಕ್ರಿಯಿಸಿ, ಬಜೆಟ್ ನಂತರ ನಾನು ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಿ ಜಿಲ್ಲೆಯ ಸಮಸ್ಯೆಗಳಿಗೆನ್ನು ಆಲಿಸುತ್ತೇನೆ. ಜಿಲ್ಲೆಯಲ್ಲಿ ಸ್ಫೋಟಕ ವಸ್ತುಗಳ ಸಾಗಾಟ ನಡೆಯುತ್ತಿದೆ ಅಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಸಮಸ್ಯೆಗಳನ್ನು ಆಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement