ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಲಾರಿಗಳ ವಶ

Rashmi Kasaragodu
Updated On : 7 Jul 2014, 1:41 am

ಹೊಳೆನರಸೀಪುರ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ 2 ಲಾರಿಗಳನ್ನು ಇಲ್ಲಿನ ಪೊಲೀಸ್ ಇನ್ಸ್ಪೆಕ್ಟರ್ ಎನ್. ಕೃಷ್ಣಪ್ಪ ತಂಡ ತಾಲೂಕಿನ ಲಕ್ಕೂರು ಗ್ರಾಮದ ಬಳಿ ಹಿಡಿದು ಜಾನುವಾರುಗಳು ಹಾಗೂ ಲಾರಿಗಳನ್ನು ವಶಕ್ಕೆ ಪಡೆದಿದೆ. ಪೊಲೀಸರನ್ನು ಕಂಡೊಡನೆ ಲಾರಿಗಳನ್ನು ಬಿಟ್ಟು ಚಾಲಕರಿಬ್ಬರೂ ಪರಾರಿಯಾಗಿದ್ದಾರೆ. ಈ ಸಂಬಂಧ ಇಲ್ಲಿನ ಪೊಲೀಸರು ವಾಹನಗಳ ಚಾಲಕರು ಹಾಗೂ ಮಾಲೀಕರ ವಿರುದ್ಧ ಕಲಂ 4, 5, 8 ಮತ್ತು 11 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಪರಿರಕ್ಷಣೆ ಅಧಿನಿಯಮ 1964ರ ರಿತ್ಯಾ ಕ್ರಮ ಕೈಗೊಂಡು, ದೂರು ದಾಖಲಿಸಿಕೊಂಡು ವಶಕ್ಕೆ ತೆಗೆದುಕೊಂಡಿರುವ ಜಾನುವಾರುಗಳನ್ನು ಮೈಸೂರಿನ ಪಿಂಜರಾಪೋಲ್ಗೆ ಸಾಗಿಸಲು ಕ್ರಮ ಕೈಗೊಂಡಿದ್ದಾರೆ.
ಚಿಲ್ಲರೆ ಅಂಗಡಿಯಲ್ಲಿ ಕಳವು
ಹಾಸನ: ನಗರದ ಹಾಸನಾಂಬ ಪ್ರಾವಿಜನ್ ಸ್ಟೋರ್ನಲ್ಲಿ  ಹಣ, ಸಿಗರೇಟ್ ಸೇರಿದಂತೆ ಒಟ್ಟು 50 ಸಾವಿರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಲೋಕೇಶ್ ಅವರಿಗೆ ಸೇರಿದ ಅಂಗಡಿ ಇದಾಗಿದ್ದು, ಅಂಗಡಿ ಹಿಂಬದಿಯ ಹೆಂಚನ್ನು ತೆಗೆದು ಕಳ್ಳರು ಒಳ ನುಗಿದ್ದಾರೆ. ಕ್ಯಾಷ್ ಟೇಬಲ್ನಲ್ಲಿದ್ದ 2 ಸಾವಿರ ಚಿಲ್ಲರೆ, ಸಿಗರೇಟ್ ಸೇರಿದಂತೆ ನಾನಾ ವಸ್ತುಗಳನ್ನು ಹೊತ್ತೊಯ್ದಿದ್ದಾರೆ. ಈ ಬಗ್ಗೆ ಮಾಲೀಕ ಲೋಕೇಶ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಎಪಿಎಂಸಿ ಅಧ್ಯಕ್ಷರಾಗಿ ಕಲ್ಲೇಶಪ್ಪ
ಅರಸೀಕೆರೆ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ವಾಲೇಹಳ್ಳಿ ಗ್ರಾಮದ ಎಚ್.ವಿ. ಕಲ್ಲೇಶಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಸೀಲ್ದಾರ್ ನಟರಾಜ್ ಘೋಷಿಸಿದರು. ಈ ಹಿಂದೆ ಅಧ್ಯಕ್ಷರಾಗಿದ್ದ ಅಜ್ಜಪ್ಪ ಒಪ್ಪಂದದಂತೆ ರಾಜಿನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಿಗಧಿಯಾಗಿತ್ತು. ಕಲ್ಲೇಶಪ್ಪ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದಿದ್ದರಿಂದ ಅವರ ಆಯ್ಕೆಯನ್ನು ಘೋಷಿಸಲಾಯಿತು. ನಂತರ ಮಾತನಾಡಿದ ಅವರು, ರೈತರು ಮತ್ತು ವರ್ತಕರ ಅಗತ್ಯತೆಗೆ ಸ್ಪಂದಿಸುವ ಕೆಲಸ ಮಾಡಲು ಬದ್ಧರಾಗಿರುವುದಾಗಿ ಹೇಳಿದರು. ಶಾಸಕ ಕೆ.ಎಂ. ಶಿವಲಿಂಗೇಗೌಡ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು. ಎಪಿಎಂಸಿ ಕಾರ್ಯದರ್ಶಿ ಮಂಜುನಾಥ್, ಉಪಾಧ್ಯಕ್ಷ ಕಣಕಟ್ಟೆ ಕೆ.ಎಂ. ಸನಾವುಲ್ಲಾ, ಬಾಣಾವರ ಅಶೋಕ್, ಮುರುಂಡಿ ಶಿವಯ್ಯ ಇತರರು ಅಧ್ಯಕ್ಷರನ್ನು ಅಭಿನಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement