ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಾಬು ಜಗಜೀವನ್ರಾಮ್ ಕೊಡುಗೆ ಅಪಾರ

Rashmi Kasaragodu
Updated On : 7 Jul 2014, 1:41 am

ಹಾಸನ: ಡಾ. ಬಾಬು ಜಗಜೀವನ್ರಾಮ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪುರುಷೋತ್ತಮ್ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ರಾಮ್ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ದೀನ ದಲಿತರ ಏಳ್ಗೆಗಾಗಿ ಹೋರಾಟ ಮಾಡಿದ ಧೀಮಂತ ವ್ಯಕ್ತಿ ಆಗಿದ್ದರು ಎಂದರು. ಮಾದಿಗ ದಂಡೋರ ಜಿಲ್ಲಾಧ್ಯಕ್ಷ ವಿಜಯಕುಮಾರ್ ಮಾತನಾಡಿ, ಜಗಜೀವನರಾಂ ಅವರು ವಿದ್ಯಾರ್ಥಿ ದೆಸೆಯಿಂದಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಧುಮುಕಿದರು. ಅಸ್ಪೃಶ್ಯತೆ, ಧಾರ್ಮಿಕ ಆಚರಣೆ ಸೇರಿದಂತೆ ನಾನಾ ಸಮಸ್ಯೆಯನ್ನು ನಿವಾರಣೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು. ಜಿಪಂ ಯೋಜನಾಧಿಕಾರಿ ನಾಗರಾಜ್, ಎಚ್.ಕೆ. ಸಂದೇಶ್, ಕೆ. ಈರಪ್ಪ, ನಾರಾಯಣ್, ಚಿನ್ನಸ್ವಾಮಿ, ಪ್ರಕಾಶ್, ಶೇಖರಪ್ಪ, ಹೆತ್ತೂರು ನಾಗರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement