ಐಎಎಸ್, ಐಪಿಎಸ್ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಹಾಸನ: ಸಮಾಜ ಕಲ್ಯಾಣ ಇಲಾಖಾವತಿಯಿಂದ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳನ್ನು ಐ.ಎ.ಎಸ್, ಐಪಿಎಸ್ ಮತ್ತು ಇತರೆ ಪರೀಕ್ಷೆಗಳಿಗೆ ದೆಹಲಿ, ಹೈದ್ರಾಬಾದ್ ಮತ್ತು ಬೆಂಗಳೂರಿನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಉಚಿತವಾಗಿ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರು. ಮೀರಿರಬಾರದು. ಅರ್ಜಿಯನ್ನು ಜು. 25ರವರೆಗೆಸ್ವೀಕರಿಸಲಾಗುವುದು ಎಂದು ಹಾಸನ ಜಿಲ್ಲಾ ಸಮಾಜ
ಕಲ್ಯಾಣಾಧಿಕಾರಿಯವರು ತಿಳಿಸಿದ್ದಾರೆ.
ಕೆ.ಡಿ.ಪಿ. ಸಭೆ: ಸಕಲೇಶಪುರ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಸಿದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಜು. 8ರಂದು ಬೆಳಿಗ್ಗೆ 10.30ಕ್ಕೆ ಕೆಡಿಪಿ ಸಭೆ ಜರುಗಲಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.