ತರಬೇತಿ
ಮೈಸೂರು: ಜಿಲ್ಲೆಯ ಹಿಂದುಳಿದ ವರ್ಗಗಳ ವರ್ಗ- 1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 1 ಸಾವಿರ ತರಬೇತಿ ಭತ್ಯೆ ನೀಡಲಾಗುವುದು. ಅರ್ಜಿ ಸಲ್ಲಿಸುವವರ ವಯೋವುತಿ 30 ವರ್ಷ ಮೀರಿರಬಾರದು. ಕುಟುಂಬದ ವಾರ್ಷಿಕ ಆದಾಯ ಮಿತಿ ವರ್ಗ- 1ರ ಅಭ್ಯರ್ಥಿಗಳಿಗೆ 3,50,000 ಹಾಗೂ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 2,50,000 ಮೀರಿರಬಾರದು.
ಅರ್ಜಿಯನ್ನು ಜಿಲ್ಲಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಆದಿಚುಂಚನಗಿರಿ ರಸ್ತೆ, ಕಾವೇರಿ ಸ್ಕೂಲ್ ಹತ್ತಿರ, ಕುವೆಂಪುನಗರ, ಮೈಸೂರು ಇಲ್ಲಿ ಪಡೆದು ಜು. 19ರೊಳಗೆ ಅರ್ಜಿ ಸಲ್ಲಿಸಬೇಕು. 0821- 2342917 ಸಂಪರ್ಕಿಸಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.