ಉಚಿತ ಕಾರ್ಯಾಗಾರ
ಹಾಸನ: ಭಾರತ ಜ್ಞಾನ ವಿಜ್ಞಾನ ಸಮಿತಿ (ಬಿಜಿವಿಎಸ್) ಮತ್ತು ಬೆಂಗಳೂರಿನ ಫ್ರೀ ಸಾಫ್ಟ್ವೇರ್ ಮೊಮೆಂಟ್ ಆಫ್ ಕರ್ನಾಟಕ ( ಎಫ್ಎಸ್ಎಂಕೆ)ದ ಆಶ್ರಯದಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ತಂತ್ರಾಂಶಗಳ ಪರಿಚಯ ಮತ್ತು ಅಭಿವೃದ್ದಿಗಳ ಬಗ್ಗೆ ಕಾರ್ಯಾಗಾರವನ್ನು ಜು. 12 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಿಜಿವಿಎಸ್ನ ಜಿಲ್ಲಾ ಕಾರ್ಯದರ್ಶಿ ಬಿ.ಜಿ. ಗೋಪಾಲಕೃಷ್ಣ ತಿಳಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಕಂಪ್ಯೂಟರ್ನಲ್ಲಿ ಉಪಯೋಗಿಸಬಹುದಾದ ಅನೇಕ ತಂತ್ರಾಂಶಗಳು ಅಂತರ್ಜಾಲದಲ್ಲಿ ಲಭ್ಯವಿದ್ದು, ಅವುಗಳನ್ನು ಉಚಿತವಾಗಿ ತಮ್ಮ ಕಂಪ್ಯೂಟರ್ಗಳಿಗೆ ಡೌನ್ಲೋಡ್ ಮಾಡಿಕೊಂಡು, ಉಪಯೋಗಿಸಬಹುದಾಗಿದೆ. ಆಸಕ್ತರು ಜು. 11 ರಂದು ಸಂಜೆ 5 ರೊಳಗಾಗಿ ನಗರದ ಮಹಾರಾಜ ಪಾರ್ಕ್ ಹಿಂಭಾಗದ ಸೀತಾರಾಮಾಂಜನೇಯ ದೇವಾಲಯದ ರಸ್ತೆಯಲ್ಲಿ ಇರುವ ಸಾಫ್ಟೆಕ್ ಕಂಪ್ಯೂಟರ್ ಅಕಾಡೆಮಿಯಲ್ಲಿ ಹೆಸರು ನೋಂದಾಯಿಸಲು ಕೋರಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.