ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಗರ ವಿದ್ಯಾರ್ಥಿಗಳಿಗೆ ಹಳ್ಳಿ ಮಕ್ಕಳ ಸವಾಲ್

Rashmi Kasaragodu
Updated On : 13 Jul 2014, 12:31 pm

ಅರಕಲಗೂಡು: ಪ್ರಸ್ತುತ ಇರುವ ಸ್ಪರ್ಧಾತ್ಮಕ ಸನ್ನಿವೇಶದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಟ್ಟಣದ ವಿದ್ಯಾರ್ಥಿಗಳೊಂದಿಗೆ ಇರುವ ಅಂತರ ಕಡಿಮೆ ಮಾಡುವ ಸಲುವಾಗಿ ಶ್ರದ್ಧೆ ಮತ್ತು ಪರಿಶ್ರಮದಿಂದ ಕಲಿಕೆಗೆ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಿದ್ಧತೆಯನ್ನು ನಡೆಸಬೇಕಾದ ಮತ್ತು ಅದಕ್ಕೆ ಅಗತ್ಯ ಅಂಕಗಳ ಗಳಿಕೆಗೆ ಹೆಚ್ಚು ಗಮನ ನೀಡುವ ಅಗತ್ಯವಿದೆ ಎಂದು ಹಾಸನ ಪಿಯುಸಿ ಕಾಲೇಜಿನ ಪ್ರಾಚಾರ್ಯ ನವೀನ್ ತಿಳಿಸಿದ್ದಾರೆ.
ಪಟ್ಟಣದ ಹಾಸನ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಸಿಇಟಿ ಪರೀಕ್ಷೆಗಾಗಿ ತರಬೇತಿ ತರಗತಿಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಕಾಲೇಜಿನ ಆಡಳಿತ ವರ್ಗ ಮತ್ತು ಉಪನ್ಯಾಸಕರು ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ತರಬೇತಿ ಕೊಡಲಾಗುತ್ತಿದೆ. ಇದರ ಸದುಪಯೋಗ ಪಡೆದು ವಿದ್ಯಾರ್ಥಿಗಳು ಕಾಲೇಜು ಮತ್ತು ಪೋಷಕರಿಗೆ ಕೀರ್ತಿ ತರಬೇಕು ಎಂದರು.
ತರಗತಿಯ ಉದ್ಘಾಟನೆಯನ್ನು ಪ್ರೌಢಶಾಲಾ ಮುಖ್ಯಶಿಕ್ಷಕ ಮನುಕುಮಾರ್ ನೆರವೇರಿಸಿದರು. ಅತಿಥಿಗಳಾಗಿ ಕಾಲೇಜಿನ ಕಾರ್ಯದರ್ಶಿ ಬಿ.ಕೆ.ಗಂಗಾಧರ್, ಬೆಂಗಳೂರಿನ ಎನ್-ಏಬಲ್ ಗ್ರೂಪ್ ನಿರ್ದೇಶಕ ರಾಮಚಂದ್ರ, ಸಂಪನ್ಮೂಲ ವ್ಯಕ್ತಿ ನವೀನ್, ಕೃಷ್ಣಮೂರ್ತಿ, ವೇದಮೂರ್ತಿ, ದರ್ಶನ್, ಪ್ರದೀಪ್ಕುಮಾರ್, ಸಂತೋಷ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement