ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪ್ರತಿಭಾವಂತರು ವಿದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ

Rashmi Kasaragodu
Updated On : 13 Jul 2014, 12:29 pm

ಹಾಸನ: ಉನ್ನತ ಶಿಕ್ಷಣ ಪಡೆದ ಪ್ರತಿಭಾವಂತರು ಸಮಾಜದ ಋಣ ಮರೆತು ವಿದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ ಇದರಿಂದ ಗ್ರಾಮೀಣ ಭಾರತ ಬಡವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಷಾದ ವ್ಯಕ್ತಪಡಿಸಿದ್ದಾರೆ. ನಗರದ ಬಿಈಜಿ ಪ್ರಥಮ ದರ್ಜೆ ಕಾಲೇಜಿನ ಕರಾಮುವಿ ಅಧ್ಯಯನ ಕೇಂದ್ರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಯಲದ ಹಾಸನ ಪ್ರಾದೇಶಿಕ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು 2014-15 ನೇ ಸಾಲಿನ ಮುಕ್ತ ವಿವಿ ವಿವರಣಾ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಈ ಪ್ರತಿಭಾ ಪಲಾಯನದಿಂದ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆ ದೊರೆಯದೆ ಜನರು ತೊಂದರೆ ಅನುಭವಿಸುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿಯುವಂತಾಗಿದೆ. ಪ್ರತಿಭಾವಂತರ ಸೇವೆ ನಮ್ಮ ಜನರಿಗೆ ದೊರೆತಾಗ ಮಾತ್ರ ಅವರು ಪಡೆದ ಶಿಕ್ಷಣಕ್ಕೆ ಅರ್ಥ ಬರುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement