ಮೀನುಗಾರಿಕೆ ಸೌಲಭ್ಯಗಳು ಸದ್ಬಳಕೆಯಾಗಲಿ
ಹೊಳೆನರಸೀಪುರ: ರಾಜ್ಯ ಸರ್ಕಾರವು ಮೀನುಗಾರಿಕಾ ಇಲಾಖೆಯ ವತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿನ ಮೀನುಗಾರರ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು ಮತ್ತು ಸಾರ್ವಜನಿಕರಿಗೆ ಪೌಷ್ಟಿಕಾಂಶದ ಸ್ಥಿತಿಯನ್ನು ಸುಧಾರಿಸಲು ಉದ್ದೇಶಿಸಲಾಗಿದೆ ಎಂದು ತಾಲೂಕಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಸುಮತಿ ತಿಳಿಸಿದರು. ತಾಲೂಕಿನ ಕಟ್ಟೆಬೆಳಗುಲಿ ಪಂಚಾಯ್ತಿಯಲ್ಲಿ ನಡೆದ ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೀನುಗಾರಿಕೆ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಅರ್ಜಿ ಸಲ್ಲಿಸಲು ಸಲಹೆ: ಕಟ್ಟೇಬೆಳಗುಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲತಾ ಮಾತನಾಡಿ, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ವೈಯಕ್ತಿಕ ಫಲಾನುಭವಿ ಆಧಾರಿತ ಕ್ರಿಯಾ ಯೋಜನೆ ತಯಾರಿಸುವ ಕಾಮಗಾರಿ ಆಯ್ಕೆ ವಿಚಾರ ಹಾಗೂ ಅನುಷ್ಠಾನದ ಬಗ್ಗೆ ಕಟ್ಟೆಬೆಳಗುಲಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ.ಪುಟ್ಟೇಗೌಡ ಮಾತನಾಡಿದರು.