ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಾಸನ: ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಗರದ ಹೇಮಾವತಿ ನಗರದ ನಿವಾಸಿ ಪ್ರಕಾಶ್ ಎಂಬವರ ಪುತ್ರಿ ಸುಮನ್(19) ಎಂಬ ಯುವತಿಯೇ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಯುವತಿ. ಈಕೆ ನಗರದ ಸುಜುಲ ಪಿಯು ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಮನ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನಗರದ ಪೆನ್ಷ್ನ್ ಮೊಹಲ್ಲಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.