ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜನಸಂಖ್ಯೆ ಹೆಚ್ಚಳ ದೇಶದ ಪ್ರಗತಿಗೆ ಮಾರಕ

Vishwanath S
Updated On : 16 Jul 2014, 12:53 pm

ಕನ್ನಡಪ್ರಭ ವಾರ್ತೆ, ಅರಸೀಕೆರೆ, ಜು. 15
ಜನಸಂಖ್ಯೆ ಸಮನ್ವಯತೆ ಸಾಧಿಸದ ಹೊರತು ದೇಶದ ಪ್ರಗತಿ ಅಸಾಧ್ಯವೆಂದು ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಎಂ. ಮೋಹನ್ ಹೇಳಿದರು.
ಪಟ್ಟಣದ ರೋಟರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ, ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ದೊಡ್ಡ ರಾಷ್ಟ್ರ ಭಾರತದಲ್ಲಿ ಮಾನವ ಸಂಪತ್ತು ಸಮರ್ಪಕವಾಗಿ ಸರ್ಕಾರಗಳು ಬಳಸಿಕೊಳ್ಳಲು ವಿಫಲವಾಗಿರುವುದರಿಂದ ದೇಶ ಇನ್ನೂ ಪ್ರಗತಿ ಪಥದಲ್ಲೇ ಸಾಗುತ್ತಿದೆ ಎಂದರು.
ಸ್ವಯಂ ಉದ್ಯೋಗ: ಮಾಜಿ ಅಧ್ಯಕ್ಷ ಎನ್.ಜಿ. ಮಧು ಮಾತನಾಡಿ, ನೂರಾ ಇಪ್ಪತ್ತು ಕೋಟಿಗೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಎಲ್ಲರಿಗೂ ಸರಕಾರ ಉದ್ಯೋಗ ಕೊಡಲು ಸಾಧ್ಯವಿಲ್ಲ. ಇದನ್ನ ಮನಗೊಂಡು ವಿದ್ಯಾರ್ಥಿಗಳು ಸ್ವಯಂ ಉದ್ಯೋಗಗಳನ್ನು ಸೃಷ್ಟಿಸುವ ಜೊತೆಗೆ ಇತರರಿಗೂ ಉದ್ಯೋಗ ನೀಡುವ ನಿಟ್ಟಿನಲ್ಲಿ ಆಲೋಚಿಸಬೇಕು. ಆ ಮೂಲಕ ದೇಶದ ಪ್ರಗತಿಗೆ ತಮ್ಮ ಕೊಡುಗೆ ನೀಡುವಂತೆ ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ರೋಟರಿ ಸಂಸ್ಥೆಯ ವಲಯ ಸೇನಾನಿ ರಾಕೇಶ್ ಮೆಹ್ತಾ, ಮಾಜಿ ಅಧ್ಯಕ್ಷ ಬಿ.ಕೆ. ಯೋಗೀಶಚಾರ್, ರೋಟರಿಯನ್ ಗೋವಿಂದ ರಾವ್, ಲಕ್ಷ್ಮಣ್ ರಾವ್, ಶಾಲೆಯ ಮುಖ್ಯ ಶಿಕ್ಷಕ ಜೆ.ಜೆ.ಎನ್. ನಾರಾಯಣ ಶರ್ಮ ಮತ್ತಿತರು ಇದ್ದರು.
ಪ್ರಬಂಧ ಸ್ಪರ್ಧೆ: ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ಶಾಲೆಯ 8-9 ಹಾಗೂ 10ನೇ ತರಗತಿ ವಿದ್ಯಾರ್ಥ್ಥಿಗಳಿಗೆ ಪ್ರತ್ಯೇಕವಾಗಿ ಜನಸಂಖ್ಯಾ ಸ್ಫೋಟ ಅನುಕೂಲ ಮತ್ತು ಅನಾನುಕೂಲ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement