ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮನುಷ್ಯನ ಬದುಕಿನಲ್ಲಿ ಜ್ಞಾನದ ಅರಿವು ಮುಖ್ಯ

Vishwanath S
Updated On : 17 Jul 2014, 1:00 am

ಹಾಸನ: ಮನುಷ್ಯನ ಬದುಕಿನಲ್ಲಿ ಹಣವೇ ಮುಖ್ಯವಲ್ಲ. ಜ್ಞಾನದ ಅರಿವೂ ಅಷ್ಟೇ ಅವಶ್ಯಕ ಎಂದು ವಕೀಲರಾದ ವೇದಾವತಿ ನುಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ಬೀರನ ಹಳ್ಳಿ ಕೆರೆಯ ಸಂಘದ ಮನೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಶ್ರೀ ಗ್ರಾಮದೇವತಾ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಸಾಮರಸ್ಯದ ಬದುಕು ಪ್ರತಿಯೊಬ್ಬರಿಗೂ ಅವಶ್ಯಕ. ಸರ್ಕಾರದಿಂದ ಉಚಿತ ಸಲಹೆ, ಯೋಜನೆಗಳು ಮಹಿಳೆಯರಿಗಾಗಿ ಇದ್ದು, ಇವುಗಳ ಬಗ್ಗೆ ಮಾಹಿತಿ ಇದ್ದಲ್ಲಿ ಯೋಜನೆ ಫಲಪ್ರದವಾಗುತ್ತದೆ. ಜೊತೆಗೆ ಶೋಷಿತವಾಗುವುದು ಕೂಡ ತಪ್ಪುತ್ತದೆ ಎಂದರು.
ಮನೆ ಬಾಗಿಲಿಗೆ ಸೇವೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಅಧ್ಯಯನ ಮಾಡಿ, ಮನೆ ಬಾಗಿಲಿಗೆ ಸೇವೆ ಸಲ್ಲಿಸುತ್ತಿರುವುದು ಸಂತಸದ ವಿಷಯ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕಿನ ಯೋಜನಾಧಿಕಾರಿ ಲೀಲಾವತಿ, ತಾಲೂಕಿನಲ್ಲಿ 9000ಕ್ಕಿಂತ ಹೆಚ್ಚು ಸ್ವಸಹಾಯ ಸಂಘಗಳನ್ನು ರಚಿಸಿ, ಈಗಾಗಲೇ ರು. 13ಕೋಟಿ ಸಾಲ ನೀಡಲಾಗಿದೆ. ಮಹಿಳೆಯರಿಗೆ ಕೇವಲ ಸಾಲ ನೀಡುವುದಲ್ಲದೆ, ಅವರ ಬೆಳವಣಿಗೆಗೆ ಪೂರಕವಾಗಿ ಅವರಲ್ಲಿನ ಸಮಸ್ಯೆಗಳನ್ನು ಚರ್ಚೆ ಮುಖೇನ ಕಂಡುಕೊಂಡು ಪರಿಹಾರಕ್ಕಾಗಿ ಯೋಜನೆ ವತಿಯಿಂದ ಪ್ರಯತ್ನಿಸಲಾಗುತ್ತಿದೆ ಎಂದರು.
ಸ್ವಾವಲಂಬಿ ಬದುಕು: ನಗರಸಭಾ ಸದಸ್ಯ ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೋಜನೆಯಿಂದ ಜನತೆಯಲ್ಲಿ ಹಂತ ಹಂತವಾಗಿ ಹೊಸ ಬದಲಾವಣೆಗಳೊಂದಿಗೆ ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದು ಸಂತೋಷದ ವಿಷಯ ಎಂದರು. ಮೇಲ್ವಿಚಾರಕರಾದ ಸರಿತ, ರಾಷ್ಟ್ರೀಯ ಸೇವಾ ಕಾರ್ಯಕರ್ತ ಆರ್.ಜಿ. ಗಿರೀಶ್ ಇನ್ನಿತರರು ಉಪಸ್ಥಿತರಿದ್ದರು. ಮಹಿಳಾ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಪೂರ್ಣಿಮಾ ನಿರೂಪಿಸಿದರು. ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement