ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅತ್ಯಾಚಾರ ಖಂಡಿಸಿ ಪ್ರತಿಭಟನೆ

Mainashree
Updated On : 18 Jul 2014, 10:59 am

ಕನ್ನಡಪ್ರಭ ವಾರ್ತೆ, ಹೊಳೆನರಸೀಪುರ, ಜು.18
ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಹಾಗೂ ಇತ್ತೀಚೆಗೆ ರಾಜ್ಯದ ನಾನಾ ಕಡೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಸಂಘಟನೆಯೊಂದಿಗೆ ನೂರಾರು ವಿದ್ಯಾರ್ಥಿನಿಯರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
 ಪಟ್ಟಣದಲ್ಲಿನ ಹೇಮಾವತಿ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟ ಪೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಇಲ್ಲಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಸರ್ಕಾರದ ವೈಫಲ್ಯ: ಅಲ್ಲದೇ, ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಸುರಕ್ಷತೆ ಇಲ್ಲದ ಕುರಿತಂತೆ ಸರ್ಕಾರದ ವೈಫಲ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು.
 ಈ ಪ್ರಕರಣದಲ್ಲಿ ಕೇವಲ ಬೆದರಿಕೆ ಪ್ರಕರಣ ದಾಖಲಿಸಿಕೊಂಡು, ವಿದ್ಯಾರ್ಥ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸದೇ ನಿರ್ಲಕ್ಷ್ಯ ತೋರಿರುವ ಇನ್ಸ್‌ಪೆಕ್ಟರ್ ರಫೀಕ್ ಹಾಗೂ ಆರೋಪಿ ನಾಸಿರ್ ಹೈದರನನ್ನು  ಕೂಡಲೇ ಬಂಧಿಸುವಂತೆ ಸಂಘಟನೆಯ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
1061ಅತ್ಯಾಚಾರ ಪ್ರಕರಣ: ಅಲ್ಲದೇ ಕರ್ನಾಟಕವೊಂದರಲ್ಲೇ 2009ರಿಂದ 2011ರವರೆಗಿನ ಎರಡು ವರ್ಷಗಳಲ್ಲಿ 14.989ಮಹಿಳೆ ಹಾಗೂ ಯುವತಿಯರು ಕಾಣೆಯಾಗಿದ್ದು, ಕೇವಲ ಬೆಂಗಳೂರಿನಲ್ಲೇ ಈ ಪ್ರಸಕ್ತ ವರ್ಷದಲ್ಲಿ 325ಬಾಲಕಿಯರು ಹಾಗೂ 151ಯುವತಿಯರ ಮೇಲೆ ಅತ್ಯಾಚಾರ ಯತ್ನ ನಡೆದ ಪ್ರಕರಣಗಳು ವರದಿಯಾಗಿದ್ದು, 1061ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರೂ ರಾಜ್ಯದ ಗೃಹ ಸಚಿವರು ಈ ನಿಟ್ಟಿನಲ್ಲಿ ಸೂಕ್ತವಾಗಿ ಹಾಗೂ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿದರು.
ಹೆಚ್ಚುತ್ತಿರುವ ಕ್ರೌರ್ಯ: ರಾಜ್ಯದಲ್ಲಿ ಕೊಲೆ, ಅತ್ಯಾಚಾರ, ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಮುಂದಲಾದ ಕೌರ್ಯಗಳನ್ನು ಮೆರೆಯುತ್ತಿದ್ದರೂ ಸಾಮಾಜಿಕ ಬದ್ಧತೆಯನ್ನು ತೋರುವಲ್ಲಿ ವಿಫಲವಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಬಿವಿಪಿ ಸಂಘಟನೆಯೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಡಿದ್ದ ನೂರಾರು ವಿದ್ಯಾರ್ಥಿನಿಯರು ಕಿಡಿಕಾರಿದರು.  ನಂತರ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹ ಪತ್ರವನ್ನು ನಿಡಲಾಯಿತು. ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಅಮಿತ್, ಯೋಗಾನರಸಿಂಹ, ತಾಲೂಕು ಕಾರ್ಯದರ್ಶಿ ಅಭಿಷೇಕ್, ಕಾರ್ಯಕರ್ತರಾದ  ಕಿರಣ್, ಅನಿಲ್, ದಯಾನಂದ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement