ಹಾಸನ

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ

ಹಾಸನ: ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಶ್ರಯದಲ್ಲಿ ನೂರಾರು ವಿದ್ಯಾರ್ಥಿಗಳು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು. ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು, ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿದರು.
ದೌರ್ಜನ್ಯ: ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, ರಾಜ್ಯಾದ್ಯಂತ ಅತ್ಯಾಚಾರ ಪ್ರಕರಣಗಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಮುಂದೆ ಸೂಕ್ತವಾದ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ತಡೆಗಟ್ಟಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಕ್ರಮ ಜರುಗಿಸದೇ ಇರುವುದು ನಾಚಿಗೇಡಿನ ಸಂಗತಿ. ಇದು ತಲೆತಗ್ಗಿಸುವ ಸಂಗತಿಯಾಗಿದೆ ಎಂದು ಖಂಡಿಸಿದರು.
ದೆಹಲಿಯಲ್ಲಿ ನಿರ್ಭಯ ಅತ್ಯಾಚಾರ ಪ್ರಕರಣ ನಡೆದ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಂತಹ ಪ್ರಕರಣ ನಡೆದಿದೆ. ರಾಜ್ಯದ 24 ಘಂಟೆಗಳ ಒಳಗೆ ಇನ್ನು 6 ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮನವಿ: ಕೂಡಲೇ ಸರ್ಕಾರ ಸೂಕ್ತ ಹಾಗೂ ಜನಹಿತವಾದ ಕಾನೂನು ತಂದು, ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿ, ರಾಜ್ಯದ ಮಹಿಳೆಯರಿಗೆ ಸೂಕ್ತ ರಕ್ಷಣೆ ಕೊಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಭಿಷೇಕ್, ಜೀವನ್, ಪ್ರೇಮಕುಮಾರ್, ವಿನಯ, ಲಿಖಿತರಾಜ್, ಚಂದನ್, ಅರುಣ್ ಕುಮಾರ್, ಸುಜಯ್ ಇತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ