ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬೇಲೂರು ಹಳೇಬೀಡು ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Vishwanath S
Updated On : 22 Jul 2014, 12:46 pm

ಕನ್ನಡಪ್ರಭ ವಾರ್ತೆ ,  ಬೇಲೂರು ,  ಜು. 21
ಬೇಲೂರು ಮತ್ತು ಹಳೇಬೀಡು ನಡುವಿನ ಹೆದ್ದಾರಿ ರಸ್ತೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಮಳೆಯಿಂದಾಗಿ ವಾಹನ ಸಂಚಾರ ದುಸ್ತರವಾಗಿದೆ. ಆದರೆ ಸಂಬಂಧಪಟ್ಟವರು ಇತ್ತ ಇಣಿಕಿಯೂ ನೋಡುತ್ತಿಲ್ಲ.
ಬಾಣಾವರ ಹಾಗೂ ಬೇಲೂರು ರಾಷ್ಟ್ರೀಯ ಹೆದ್ಧಾರಿ 234 ರಸ್ತೆ ಕಳೆದ ಮೂರು ವರ್ಷದ ಹಿಂದೆ ಕಾಮಗಾರಿಗೆ ಚಾಲನೆ ನೀಡಿದ್ದರು. ಗುತ್ತಿಗೆದಾರನ ವಿಳಂಬ ನೀತಿಯಿಂದ ಕಾಮಗಾರಿ ಕುಂಟುತ್ತಾ ಸಾಗಿದೆ. ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆ ಉದ್ದಕ್ಕೂ ಸೇತುವೆಗಳ ನಿರ್ಮಾಣಗೊಳ್ಳುತ್ತಿವೆ. ಇದರಿಂದಾಗಿ  ವಾಹನ ಸವಾರರು ರಸ್ತೆಯಲ್ಲಿ ಸರ್ಕಸ್ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ವಿಶೇಷವಾಗಿ ಬೇಲೂರಿನಿಂದ ಹಳೇಬೀಡು ನಡುವೆ ಸುಮಾರು 15 ಸೇತುವೆಗಳನ್ನು ನಿರ್ಮಾಣ ಮಾಡಿದ್ದು, ಸೇತುವೆ ಕಾಮಗಾರಿ ಹತ್ತಿರ ವಾಹನಗಳು ಸಂಚಾರ ಮಾಡುವುದು ಕಷ್ಟಸಾಧ್ಯವಾಗಿದೆ. ಎಂದಿಗೆ ಹೆದ್ದಾರಿ ಕಾಮಗಾರಿ ಮುಕ್ತಾಯವಾಗುತ್ತದೋ ಎಂದು ವಾಹನ ಚಾಲಕರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಬಾಣಾವರ ಬೇಲೂರು ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಕಾಮಗಾರಿ ಕೆಲ ಖಾಸಗಿ ವ್ಯಕ್ತಿಗಳ ಭೂಮಿ ವಶ ಮಾಡಿಕೊಳ್ಳುವ  ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅಧಿಕಾರಿಗಳು ಯಾವ ಕಾರಣಕ್ಕೆ ವಿಳಂಬ ನೀತಿ ಅನುಸರಣೆ ಮಾಡುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ.
ಹೆದ್ದಾರಿಯ ಅರ್ಧ ಕಾಮಗಾರಿಯಿಂದ ರಸ್ತೆ  ಸ್ಥಿತಿ ಹದಗೆಟ್ಟು ರಸ್ತೆಯಿಂದಾಗಿ ಹಲವಾರು ಅಪಘಾತಗಳು ಸಂಭವಿಸಿವೆ. ಇನ್ನಾದರೂ ಸಂಬಂಧ ಪಟ್ಟ ಇಲಾಖೆ ಅಧಿಕಾರಿ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು. ಇಲ್ಲವಾದರೆ ಪಕ್ಷಾತೀತವಾಗಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಇಲ್ಲಿನ ಹಲವು ಸಂಘಟನೆಗಳು ಎಚ್ಚರಿಕೆ ನೀಡಿವೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement