ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Mainashree
Updated On : 24 Jul 2014, 10:20 am

ಆಲೂರು: ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಹಾಗು ಪದವಿ ಕಾಲೇಜು ಬಳಿ ಸಾರಿಗೆ ಬಸ್ ನಿಲುಗಡೆಗೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
 ಕಾಲೇಜಿನಿಂದ ಮುಖ್ಯ ರಸ್ತೆಯಲ್ಲಿ ನೂರಾರು ವಿದ್ಯಾರ್ಥಿಗಳು ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ನಡೆಸಿ ಸಾರಿಗೆ ಅಧಿಕಾರಿಗಳು ಹಾಗು ಜನ ಪ್ರತಿನಿಧಿಗಳ ವಿರುದ್ದ ಘೋಷಣೆಗಳನ್ನು ಕೂಗಿ ನಂತರ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಕ್ರಮಕ್ಕೆ ಆಗ್ರಹ: ಬಸ್ ನಿಲ್ದಾಣದಿಂದ 2 ಕಿ.ಮಿ.ದೂರದಲ್ಲಿ ಕಾಲೇಜುಗಳಿದ್ದು ಇಲ್ಲಿಂದ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಹೋಗಲು ಸಾಧ್ಯವಾಗುತ್ತಿಲ್ಲ ಮಳೆಗಾಲವಾದ್ದರಿಂದ ವಿದ್ಯಾರ್ಥಿಗಳು ನೆನೆದುಕೊಂಡೇ ಹೋಗಬೇಕು. ಅಲ್ಲದೆ ಪಟ್ಟಣದ ರಸ್ತೆಗಳು ಗುಂಡಿಮಯವಾಗಿದ್ದು ಮಳೆ ನೀರು ನಿಂತು ವಾಹನಗಳು ಹಾರಿಸುವ ಕೊಚ್ಚೆಯಿಂದ ವಿದ್ಯಾರ್ಥಿಗಳ ಬಟ್ಟೆಗಳು ಗಲೀಜಾಗಿ ನೆನೆದ ಕೊಳಕು ಬಟ್ಟೆಗಳಲ್ಲಿಯೇ ಶಾಲಾ ಕಾಲೇಜುಗಳಲ್ಲಿ ಕುಳಿತು ಪಾಠ ಕೇಳುವ ಪರಿಸ್ಥಿತಿಯಿದೆ.
 ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕ್ರಮ ಕೈಗೊಳ್ಳದಿದ್ದರೆ ರಸ್ತೆ ತಡೆ ನಡೆಸಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.  ತಾಲೂಕು ಸಂಚಾಲಕ ಅರುಣ್ ಕುಮಾರ, ಕಾವ್ಯ, ರವಿ, ಪೂಜ, ವಿನುತ, ವನಿತ, ಚೈತ್ರ, ಶರಣ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement