ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮನೆ ಮನೆ ಕವಿಗೋಷ್ಠಿಯಲ್ಲಿ ಅಭಿನಂದನೆ

Mainashree
Updated On : 24 Jul 2014, 10:20 am

ಹಾಸನ: ಸಕಲೇಶಪುರದಲ್ಲಿ ಜು.26 ರಂದು ನಡೆಯಲಿರುವ ತಾಲೂಕು ಎರಡನೆ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ  ಕವಯತ್ರಿ ಸುಶೀಲಾಸೋಮಶೇಖರ್ ಅವರಿಗೆ ಮನೆ ಮನೆ ಕವಿಗೋಷ್ಠಿ ಸಂಚಾಲಕ ಕೊಟ್ರೇಶ್ ಎಸ್. ಉಪ್ಪಾರ್ ಮತ್ತಿತರ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಮಕ್ಕಳ ಸಾಹಿತ್ಯ, ವೈಚಾರಿಕ ಸಾಹಿತ್ಯ, ಕಾವ್ಯ, ಕಥೆ, ಚಿಂತನಗಳು ಹೀಗೆ ನಾನಾ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಇವರು ನಕ್ಕುಬಿಡೆ ಗೆಳತಿ, ಅಂಗಳ ಅನಾಥವಲ್ಲ, ಮಳೆ ಪುರುಷ, ವಚನ ಸಂವಹನ, ಚಿಗುರು, ನಗುವ ನಕ್ಷತ್ರಗಳು, ನುಡು ಜ್ಯೋತಿರ್ಲಿಂಗ, ಸದ್ದಿಲ್ಲದ ನಗು ಮುಂತಾದ ಹತ್ತಾರು ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿ ಶ್ರೀಮಂತಗೊಳಿಸಿದ್ದಾರೆ.
ಇವರ ಸಾಹಿತ್ಯ ಸೇವೆಗಾಗಿ ರುಕ್ಮಿಣಿ ಬಾಯಿ ಸ್ಮಾರಕ ಸಾಹಿತ್ಯ ಪ್ರಶಸ್ತಿ, ನೀಲಗಂಗಾ ದತ್ತಿ ಪ್ರಶಸ್ತಿ, ಪಂಡಿತ ಪುಟ್ಟರಾಜ ಸಾಹಿತ್ಯ ಪ್ರಶಸ್ತಿ, ಜನಮೆಚ್ಚಿದ ಶಿಕ್ಷಕಿ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ, ಕಾವ್ಯಶ್ರೀ ಪ್ರಶಸ್ತಿ, ಮಹಿಳಾ ಪ್ರಶಸ್ತಿ, ಗುಣಸಾಗರಿ ನಾಗರಾಜ ದತ್ತಿ ಪ್ರಶಸ್ತಿ, ಸಿದ್ಧಯ್ಯ ಪುರಾಣಿಕ್ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕೇಸರಿ ರತ್ನ ರಾಜಯ್ಯ ದತ್ತಿ ನಿಧಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement