ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶಿಕ್ಷಣದಿಂದ ಸಮಾನತೆ ಸಾಧಿಸಬಹುದು

Mainashree
Updated On : 26 Jul 2014, 10:02 am

ಅರಸೀಕೆರೆ: ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಬಹುದು. ಗುಣಮಟ್ಟದ ಶಿಕ್ಷಣ ಸಮಾಜದ ಎಲ್ಲ ಸ್ತರದ ಮಕ್ಕಳಿಗೂ ದೊರೆಯುವಂತಾಗಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
 ತಾಲೂಕಿನ ಬಾಣಾವರ ಪೇಟೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ಆರಂಭಗೊಂಡ ಸಾರ್ವಜನಿಕ ವಿದ್ಯಾರ್ಥಿ  ನಿಲಯ ಉದ್ಘಾಟಿಸಿ ಮಾತನಾಡಿದ ಅವರು,  ಗ್ರಾಮೀಣ ಪ್ರದೇಶದ ಕಡುಬಡತನದಲ್ಲಿ ಜೀವನ ಸಾಗಿಸುತ್ತಿರುವವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿದೆ. ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
 ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ ಮಾತನಾಡಿ, ವಿದ್ಯೆಯೊಂದಿದ್ದರೆ ಏನನ್ನೂ ಬೇಕಾದರೂ ಸಾಧಿಸಲು ಸಾಧ್ಯ. ವಿದ್ಯೆಯಿಂದ ಮಾತ್ರ ದೇಶ ಅಭಿವೃದ್ಧಿಪಥದತ್ತ ಕೊಂಡೊಯ್ಯಬಹುದು ಎಂದರು.
ಗ್ರಾಪಂ ಅಧ್ಯಕ್ಷ ಜಿ.ಕೆ. ಸತೀಶ್ ಮಾತನಾಡಿ, ಕಡು ಬಡತನದಲ್ಲಿ ಹುಟ್ಟಿ ಪ್ರತಿಭಾವಂತರಾಗಿದ್ದರೂ ಅವಕಾಶವಿಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿರುವ ಮಕ್ಕಳಿಗೆ ವಸತಿ ನಿಲಯಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶವನ್ನು ನೀಡಿದೆ. ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.  
ತಾಪಂ ಅಧ್ಯಕ್ಷ ಮನಕತ್ತೂರು ಲಕ್ಷ್ಮಣ್, ಜಿಪಂ ಸದಸ್ಯೆ ರತ್ನಮ್ಮ ಗೋಪಾಲಸ್ವಾಮಿ, ತಾಪಂ ಸದಸ್ಯ ರವಿಶಂಕರ್, ಗ್ರಾಪಂ ಉಪಾಧ್ಯಕ್ಷೆ ರತ್ನಮ್ಮ ಮಂಜುನಾಥ್, ಗ್ರಾಪಂ ಮಾಜಿ ಅಧ್ಯಕ್ಷ  ಬಿ.ಎಂ.ಜಯಣ್ಣ, ಸಮಾಜ ಕಲ್ಯಾಣಾಧಿಕಾರಿ ಪ್ರಕಾಶಮೂರ್ತಿ, ಅಧೀಕ್ಷಕ ರಾಜೇಂದ್ರ, ವಾರ್ಡನ್ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement