ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿಯಬೇಕು

Srinivasa Murthy VN
Updated On : 28 Jul 2014, 9:49 am

ಕ.ಪ್ರ.ವಾರ್ತೆ ಅರಸೀಕೆರೆ  ಜು.28
ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿತು ಅಧ್ಯಾಪಕರ ಮಾರ್ಗದರ್ಶನದಂತೆ ನಡೆದರೆ ವಿದ್ಯಾರ್ಥಿ ಜೀವನದಲ್ಲಿ ಸಾಕಷ್ಟು ಪ್ರಗತಿ ಹೊಂದಲು ಸಾಧ್ಯವೆಂದು ಶ್ರೀ ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎ.ನಾಗೇಶರಾವ್ ತಿಳಿಸಿದರು.
ತಾಲೂಕಿನ ಕಣಕಟ್ಟೆಯ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಆಯೋಜಿಸಿದ್ದ ಸ್ವಾಗತ ಸಮಾರಂಭ-2014 ಮತ್ತು ಗುರು ವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.  
 ಆರ್.ಎನ್. ಕೊಪ್ಪಲು ಮಹದೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಸವರಾಜಪ್ಪ ಅವರು ಮಾತನಾಡಿ, ಗ್ರಾಮಿಣ  ಪ್ರದೇಶದಲ್ಲಿ ಈ ಸಂಸ್ಥೆ ಉತ್ತಮ ಶಿಕ್ಷಣವನ್ನು  ಬಡವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದು ಅದರ ಸದುಪಯೋಗವನ್ನು ಪಡೆಯಲು ಕರೆ ನೀಡಿದರು
ಮಕ್ಕಳಲ್ಲಿ ಅರಿವು ಮೂಡಿಸಿ: ಹಿರೇಸಾದರಹಳ್ಳಿ ಶ್ರೀ ಕೊಟ್ಟೂರೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕುಮಾರಸ್ವಾಮಿ ಮಾತನಾಡಿ, ಪ್ರಚಲಿತ ಘಟನೆಗಳಾದ ಅತ್ಯಾಚಾರ ಪ್ರಕರಣಗಳ ಬಗ್ಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.
ಅಣೆಗೆರೆ ಕೋಡೀಮಠ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಮಹೇಶ್ವರಪ್ಪ, ಕಲ್ಗುಂಡಿಯ ವಿದ್ಯಾರಣ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ್, ಕಣಕಟ್ಟೆಯ ಶ್ರೀವೀರಭದ್ರೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಉಮೇಶ್ ಬಾಬು, ಕಲ್ಲುಸಾದರಹಳ್ಳಿ ಸರ್ಕಾರಿ ಪ್ರೌಢಶಾಲೆ ಹಿರಿಯ ಶಿಕ್ಷಕರಾದ ರುದ್ರಪ್ಪ ಮಾತನಾಡಿದರು.
ವಿಜ್ಞಾನ ತರಗತಿ: ಅಧ್ಯಕ್ಷತೆ ವಹಿಸಿದ್ದ ವಿದ್ಯಾರಣ್ಯ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಕೆ.ಎ.ಶಶಿಕುಮಾರ್ ಮಾತನಾಡಿ, ಮುಂಬರುವ ದಿನಗಳಲ್ಲಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement