ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅನುಮಾನಾಸ್ಪದ ಸಾವು

Rashmi Kasaragodu
Updated On : 30 Jul 2014, 10:52 am

ಹಾಸನ: ಪತಿ ಹಾಗೂ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ರಂಗೋಲಿಹಳ್ಳದಲ್ಲಿ ಬುಧವಾರ ಸಂಜೆ ನಡೆದಿದೆ.  ನಗರದ ರಂಗೋಲಿಹಳ್ಳದ ನಿವಾಸಿ ಕೃಷ್ಣ (45) ಮತ್ತು ಪತ್ನಿ ಸುವರ್ಣ(40) ಎಂಬವರೇ ಮೃತಪಟ್ಟಿರುವ ದಂಪತಿ.
 ಕೃಷ್ಣ ಅವರು ಬಟ್ಟೆ ವ್ಯಾಪಾರಿಯಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಮನೆಯಲ್ಲಿ ಪತಿ ಕೃಷ್ಣ ನೇಣು ಬಿಗಿದ ಸ್ಥಿತಿಯಲ್ಲಿ ಹಾಗೂ ಪತ್ನಿ ಸುವರ್ಣ ಅವರ ಮುಖದಲ್ಲಿ ರಕ್ತ ಬರುತ್ತಿದ್ದ ಸ್ಥಿತಿಯಲ್ಲಿ ಇದ್ದರಿಂದ ಇದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.  ಇಬ್ಬರ ನಡುವೆ ಮನಸ್ಥಾಪ ಉಂಟಾಗಿ ಈ ಘಟನೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನರೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement