ವಿಪತ್ತು ನಿರ್ವಹಣ ಕಾರ್ಯಾಗಾರ
ಹಾಸನ: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ ವಿಪತ್ತು ನಿರ್ವಹಣಾ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಜು.31ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ವಿ. ಅನ್ಬುಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಛೇರ್ಮನ್ ಎಚ್.ಪಿ. ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ತರಬೇತಿ ಸಂಸ್ಥೆಯ ಮುಖ್ಯಸ್ಥ ನಾಗರಾಜ್ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡುವರು.