ವೈದ್ಯರಿಂದ ಡಿಸಿಗೆ ಮನವಿ ಸಲ್ಲಿಕೆ
ಕನ್ನಡಪ್ರಭ ವಾರ್ತೆ ಹಾಸನ ಜು 30
ವೈದ್ಯರ ಸಮಸ್ಯೆಗಳಿಗೆ ಪರಿಹಾರ ಕೊಡಿಸಬೇಕು ಎಂದು ಒತ್ತಾಯಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹತ್ತಾರು ಸಮಸ್ಯೆಗಳನ್ನು ಸಂಘ ಸರ್ಕಾರದ ಗಮನ ಸೆಳೆಯಲಾಗಿದೆ. ಕೆಲ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ಈಗ ಇರುವ ಸಮಸ್ಯೆ ಪರಿಹರಿಸದೆ ಹಾಲಿ ಇರುವ ಪ್ರಧಾನ ಕಾರ್ಯದರ್ಶಿ ಮತ್ತಷ್ಟು ಸಮಸ್ಯೆ ಹುಟ್ಟು ಹಾಕುತ್ತಿದ್ದಾರೆ. ಇತಿಮಿತಿಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿರುವ ಸರ್ಕಾರಿ ವೈದ್ಯರ ಮೇಲೆ ಪದೆ ಪದೇ ಗದಾ ಪ್ರಹಾರ ಮಾಡುತ್ತಾ ನಮ್ಮ ಮಾನಸಿಕ ಸ್ಥೈರ್ಯವನ್ನು ಕುಂದಿಸುವ ಕೆಲಸ ಮಾಡಲಾಗುತ್ತಿದೆ.
ಕಳೆದ ಜು.18 ರಂದು ಪ್ರಧಾನ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶವನ್ನು ತಕ್ಷಣ ರದ್ದು ಮಾಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ.ಬಿ.ಕೆ.ವಿಜೇಂದ್ರ, ಕಾರ್ಯಾಧ್ಯಕ್ಷ ಡಾ.ಎಚ್.ಆರ್.ತಿಮ್ಮಯ್ಯ, ಎಚ್.ಎಲ್.ಜನಾರ್ದನ್, ಖಜಾಂಚಿ ಡಾ.ಸತೀಶ್ ಕುಮಾರ್, ಯುವರಾಜ್ ಹಾಗೂ ಸಂಧ್ಯಾ ಇತರರು ಇದ್ದರು.