ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ
ಹೊಳೆನರಸೀಪುರ: ಗ್ರಾಮೀಣ ಪ್ರದೇಶದಲ್ಲಿನ ಜನರು ಕುಡಿಯುವ ನೀರಿನ ಸದ್ಬಳಕೆ ಮತ್ತು ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಅರಿವು ಹೊಂದುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಾಲೂಕಿನ ದೊಡ್ಡಬ್ಯಾಗತವಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ವಸಂತಮ್ಮ ಹೇಳಿದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಬೆಂಗಳೂರಿನ ಭಾರತೀಯ ಸೇವಾ ಸಂಸ್ಥೆಯು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ತಾಲೂಕಿನ ದೊಡ್ಡಬ್ಯಾಗತವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕುಟುಂಬವೂ ಶೌಚಾಲಯ ನಿರ್ಮಿಸಿಕೊಳ್ಳುವುದರಿಂದ ನಮ್ಮ ಆರೋಗ್ಯ ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬಹುದು ಎಂದರು.
ಭಾರತೀಯ ಸೇವಾ ಸಂಸ್ಥೆಯ ಕಾರ್ಯದರ್ಶಿ ಎಸ್.ಆರ್.ಕಾಳೇಗೌಡ ಮಾತನಾಡಿ, ನಮ್ಮ ಸಂಸ್ಥೆಯು ಇಲಾಖೆಗಳ ನಿರ್ದೇಶನದಂತೆ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುತ್ತಿದ್ದು, ಇದರ ಸದುಪಯೋಗವನ್ನು ಜನಸಾಮಾನ್ಯರಿಗೆ ತಲುಪಿಸಬೇಕಾದ ಕರ್ತವ್ಯ ಜನಪ್ರತಿನಿಧಿಗಳದ್ದಾಗಿದೆ ಎಂದರು. ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಅನುಭವಿ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜು, ಲಿಂಗರಾಜು, ಮಂಜುನಾಥ್ ಮತ್ತು ಸೋಮಶೇಖರ್ ಅವರು ಮೌಖಿಕವಾಗಿ ಮತ್ತು ಪವರ್ ಪಾಂಯಿಂಟ್ ಪ್ರೆಸೆಂಟೇಷನ್ನಿನ ಮೂಲಕ ವಿಷಯ ಮಂಡಿಸಿ ವಿವರ ನೀಡಿದರು. ಕುಡಿಯುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು, ವಾಟರ್‌ಮೆನ್‌ಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಶಾಲಾ ಶಿಕ್ಷಕರು ಇದ್ದರು.