ಹೊಯ್ಸಳ ಕಾಲೇಜಿನಲ್ಲಿ ಬಿಎ, ಬಿಕಾಂ, ಬಿಎಸ್ಸಿ ತರಗತಿಗಳಿಗೆ ಪ್ರವೇಶ
ಅರಸೀಕೆರೆ : 2014-15ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಬಿಎ, ಬಿಕಾಂ ಹಾಗೂ ಬಿಎಸ್ಸಿ ತರಗತಿಗಳಿಗೆ ಪ್ರವೇಶ ಪಡೆಯಬಹುದಾಗಿದೆ ಎಂದು ಹೊಯ್ಸಳೇಶ್ವರ ಪದವಿ ಕಾಲೇಜಿನ ನೂತನ ಪ್ರಾಂಶುಪಾಲ ಕೆ.ಎಸ್.ಜಯದೇವಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಾಂಶುಪಾಲರಾಗಿ ನೇಮಕ
ಹೊಯ್ಸಳೇಶ್ವರ ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ.ಎಸ್.ಜಯದೇವಪ್ಪ ನೇಮಕಗೊಂಡಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಮೇ.31ರಂದು ಪ್ರಾಚಾರ್ಯೆ ಸರೋಜಮ್ಮ ನಿವೃತ್ತರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಾಲೇಜು ಅಭಿವೃದ್ಧಿಗೆ ಬದ್ಧ
ತಮ್ಮ ಆಡಳಿತಾವಧಿಯಲ್ಲಿ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ. ಆಡಳಿತ ಮಂಡಳಿ ತಮ್ಮ ಮೇಲೆ ಜವಾಬ್ದಾರಿ ವಹಿಸಿದ್ದು ಅದನ್ನು ಸಮರ್ಥವಾಗಿ ನಿಭಾಯಿಸುವುದಾಗಿ ನೂತನ ಪ್ರಾಂಶುಪಾಲ ಕೆ.ಎಸ್.ಜಯದೇವಪ್ಪ ವಿಶ್ವಾಸ ವ್ಯಕ್ತಪಡಿಸಿದರು.