ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮುಂಡೆಗೆ ಶ್ರದ್ಧಾಂಜಲಿ

Rashmi Kasaragodu
Updated On : 4 Jun 2014, 1:10 am

ಹಾಸನ: ರಸ್ತೆ ಅಪಘಾತದಲ್ಲಿ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.
ಪಕ್ಷದ ಕಚೇರಿಯಲ್ಲಿ ಗೋಪಿನಾಥ್‌ಮುಂಡೆ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಅರ್ಪಿಸುವುದರ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಲೋಹಿತ್‌ಗೌಡ, ಜಿಲ್ಲಾ ಕಾರ್ಯದರ್ಶಿ ಬಸವರಾಜು, ಬಾಲಲೋಚನಾ, ಎಸ್ಸಿ ಮೋರ್ಚಾ ಅಧ್ಯಕ್ಷ ಪರ್ವತಯ್ಯ, ರೈತ ಮೋರ್ಚಾ ಅಧ್ಯಕ್ಷ ಸಿಂಘಪಟ್ಟಣ ಎಸ್.ಪಿ.ಕುಮಾರ್, ಹೊಳೆನರಸೀಪುರ ತಾಲೂಕಿನ ಪ್ರಧಾನ ಕಾರ್ಯದರ್ಶಿ ದಿವಾಕರ್, ಮೊಸಳೆ ಹೊಸಳ್ಳಿ ಚಂದ್ರು, ಶೇಷಮ್ಮ, ಸುರೇಶ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement